Objection to Congress government's work of looting the treasury. Instead of closing the university, close the Congress party itself - demands Chalavadi Narayanaswamy


12-03-2025
Press Release

Download Document

12-3-2025

ಪ್ರಕಟಣೆಯ ಕೃಪೆಗಾಗಿ

 

ಕಾಂಗ್ರೆಸ್ ಸರಕಾರದಿಂದ ಖಜಾನೆಗೆ ಕನ್ನ ಹಾಕುವ ಕೆಲಸಕ್ಕೆ ಆಕ್ಷೇಪ

ಯುನಿವರ್ಸಿಟಿ ಮುಚ್ಚುವ ಬದಲು ಕಾಂಗ್ರೆಸ್ ಪಕ್ಷವನ್ನೇ

ಮುಚ್ಚಿ ಬಿಡಿ- ಛಲವಾದಿ ನಾರಾಯಣಸ್ವಾಮಿ ಆಗ್ರಹ

 

ಬೆಂಗಳೂರು: ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳನ್ನು ಮುಚ್ಚುವ ಬದಲು ನಿಮ್ಮ ಕಾಂಗ್ರೆಸ್ ಪಕ್ಷವನ್ನೇ ಮುಚ್ಚಿಬಿಡಿ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಗ್ರಹಿಸಿದ್ದಾರೆ.

ಬೆಂಗಳೂರಿನ ವಿಧಾನ ಸೌಧದ ಕೆಂಗಲ್ ಹನುಮಂತಯ್ಯ ಪ್ರತಿಮೆ ಬಳಿ ಇಂದು ಬಿಜೆಪಿ-ಜೆಡಿಎಸ್ ಪಕ್ಷಗಳ ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಮುಚ್ಚಿಬಿಟ್ಟರೆ ದೇಶಕ್ಕೇನೂ ಆಗುವುದಿಲ್ಲ; ಕಾಂಗ್ರೆಸ್ ಇರುವವರೆಗೆ ಈ ದೇಶಕ್ಕೆ ಅಭಿವೃದ್ಧಿ, ನೆಮ್ಮದಿ ಇಲ್ಲ ಎಂದು ತಿಳಿಸಿದರು.

ಕಾಂಗ್ರೆಸ್ ಪಕ್ಷ ದೇಶಕ್ಕೆ ಗಂಡಾಂತರ ತರುವ ಕೆಲಸ ಮಾಡುತ್ತಿದೆ. ಕಾರ್ಯಕರ್ತರಿಗೆ ಖಜಾನೆ ಹಣವನ್ನು ಕೊಡಲು ನಾವು ಬಿಡುವುದಿಲ್ಲ; ಇದನ್ನು ಸಂವಿಧಾನದ ಅಡಿಯಲ್ಲಿ ಕೊಡುತ್ತ ಇದ್ದೀರಾ? ಇದನ್ನು ಕೂಡಲೇ ನಿಲ್ಲಿಸಿ ಎಂದು ಆಗ್ರಹಿಸಿದರು.

ಗ್ಯಾರಂಟಿ ಅನುಷ್ಠಾನ ಸಮಿತಿಗಳು ಕಾನೂನುಬಾಹಿರ ಮತ್ತು ಅಸಾಂವಿಧಾನಿಕ ಎಂದು ಅವರು ಮಾಧ್ಯಮಗಳಿಗೆ ತಿಳಿಸಿದರು. ಸಂವಿಧಾನದಂತೆ ಕೆಲಸ ಮಾಡುವುದು ಸರಕಾರದ ಕರ್ತವ್ಯ ಎಂದು ತಿಳಿಸಿದರು. ಅವು ಸಾಂವಿಧಾನಿಕ ಹುದ್ದೆಗಳಲ್ಲ; ಆದ್ದರಿಂದ ಕೈಬಿಡಲೇಬೇಕು ಎಂದು ಒತ್ತಾಯಿಸಿದರು.

ಕಾಂಗ್ರೆಸ್ಸಿನವರು ಖಜಾನೆಗೆ ಕನ್ನ ಹಾಕುತ್ತಿದ್ದಾರೆ ಎಂದು ತಿಳಿಸಿದರು. ಪ್ರತಿಯೊಂದು ವಿಷಯಕ್ಕೆ ಕೇಳಿದರೂ ಹಣ ಇಲ್ಲ ಎನ್ನುತ್ತೀರಿ. ಅಂಗನವಾಡಿ ಕಾರ್ಯಕರ್ತರಿಗೆ ಹಣ ಕೊಡುತ್ತಿಲ್ಲ; 9 ಯುನಿವರ್ಸಿಟಿ ಮುಚ್ಚುತ್ತಿದ್ದಾರೆ. ಕಾರ್ಯಕರ್ತರನ್ನು ಕಾಪಾಡಲು ಕಾಂಗ್ರೆಸ್ಸಿನಲ್ಲಿ ಹಣ ಇಲ್ಲವಾದರೆ, ಖಜಾನೆಗೆ ಕನ್ನ ಹಾಕುವುದಲ್ಲ; ಯುನಿವರ್ಸಿಟಿ ಮುಚ್ಚುವುದು ಸರಿಯಲ್ಲ ಎಂದು ಆಕ್ಷೇಪಿಸಿದರು. ದುಡ್ಡಿಲ್ಲವಾದರೆ ಕಾಂಗ್ರೆಸ್ ಕಚೇರಿಯನ್ನೇ ಮುಚ್ಚಿ ಬಿಡಿ ಎಂದು ಸಲಹೆ ನೀಡಿದರು.

 ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ ಸರಕಾರ ದಿನಕ್ಕೊಂದು ಹಗರಣ ಮಾಡಿ ಸಿಕ್ಕಿ ಹಾಕಿಕೊಳ್ಳುತ್ತಿದೆ. ಹಗರಣ ಸಂಬಂಧ ಉತ್ತರಿಸದೆ ವಾಮಮಾರ್ಗದಿಂದ ತಪ್ಪಿಸಿಕೊಳ್ಳುತ್ತದೆ ಎಂದು ಅವರು ಟೀಕಿಸಿದರು. ರನ್ಯಾರಾವ್ ಚಿನ್ನ ಸ್ಮಗ್ಲಿಂಗ್ ಪ್ರಕರಣದಲ್ಲಿ ಪಾಲ್ಗೊಂಡ ಸಚಿವರು ಯಾರೆಂದು ಹೇಳಿ ಎಂದು ಆಗ್ರಹಿಸಿದರು. ಕಾಂಗ್ರೆಸ್ಸಿನ ದುಂಡಾವರ್ತಿ ಕಥೆಗಳನ್ನು ಮಾನ್ಯ ರಾಜ್ಯಪಾಲರ ಮುಂದೆ ಬಿಚ್ಚಿ ಹೇಳಲಿದ್ದೇವೆ ಎಂದು ಅವರು ತಿಳಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಜೆಡಿಎಸ್ ವಿಧಾನ ಪರಿಷತ್ತಿನ ನಾಯಕ ಬೋಜೆಗೌಡ ಮತ್ತು ಬಿಜೆಪಿ-ಜೆಡಿಎಸ್ ಶಾಸಕರು ಹಾಗೂ ವಿಧಾನ ಪರಿಷತ್ತಿನ ಸದಸ್ಯರು À ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

 

 

 

 

(ಕರುಣಾಕರ ಖಾಸಲೆ)

ಮಾಧ್ಯಮ ಸಂಚಾಲಕರು

ಬಿಜೆಪಿ ಕರ್ನಾಟಕ

To Write Comment Please लॉगिन