
20-3-2025
ಪ್ರಕಟಣೆಯ ಕೃಪೆಗಾಗಿ
ನಿಧನಕ್ಕೆ ವಿಜಯೇಂದ್ರ ಸಂತಾಪ
ಬೆಂಗಳೂರು: ಬಿಜೆಪಿ ರಾಜ್ಯ ಮಾಧ್ಯಮ ಸಮಿತಿ ಸದಸ್ಯ ನಾಗೇಶ್ ಬಿ. ಅವರ ತಂದೆ ಭಗವಂತಪ್ಪನವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ದೇವನಹಳ್ಳಿ ಪಿ.ಎಲ್.ಡಿ. ಬ್ಯಾಂಕಿನ ಮಾಜಿ ಅಧ್ಯಕ್ಷರಾದ ಅವರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ರಾಮನಾಥಪುರದ ನಿವಾಸಿ. ಮೃತರ ಕುಟುಂಬಕ್ಕೆ ಬಂಧುಮಿತ್ರರು ಮತ್ತು ಅಭಿಮಾನಿಗಳಿಗೆ ಅಗಲುವಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.
(ಕರುಣಾಕರ ಖಾಸಲೆ)
ಮಾಧ್ಯಮ ಸಂಚಾಲಕರು
ಬಿಜೆಪಿ ಕರ್ನಾಟಕ
To Write Comment Please लॉगिन