
28-3-2025
ಪ್ರಕಟಣೆಯ ಕೃಪೆಗಾಗಿ
ಬಿ.ಎನ್.ಗರುಡಾಚಾರ್ ಅವರ ನಿಧನಕ್ಕೆ ವಿಜಯೇಂದ್ರ ಸಂತಾಪ
ಬೆಂಗಳೂರು: ನಿವೃತ್ತ ಪೆÇಲೀಸ್ ಮಹಾನಿರ್ದೇಶಕ ಮತ್ತು ಚಿಕ್ಕಪೇಟೆ ಬಿಜೆಪಿ ಶಾಸಕ ಉದಯ್ ಬಿ ಗರುಡಾಚಾರ್ ಅವರ ತಂದೆ ಬಿ.ಎನ್.ಗರುಡಾಚಾರ್ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಬೆಂಗಳೂರಿನ ಮೊದಲ ಪೆÇಲೀಸ್ ಕಮಿಷನರ್ ಸಿ.ಚಾಂಡಿ ಅವರ ಕಾಲದಲ್ಲಿ ಬೆಂಗಳೂರು ಸಂಚಾರ ವಿಭಾಗದ ಡಿಸಿಪಿ ಆಗಿದ್ದ ಬಿ.ಎನ್ ಗರುಡಾಚಾರ್ ಅವರು, ಎನ್.ಆರ್ ಜಂಕ್ಷನ್ ನಲ್ಲಿ 1963ರಲ್ಲಿ ಸಂಚಾರ ದಟ್ಟಣೆ ಹೆಚ್ಚಿದ್ದ ಕಾರಣಕ್ಕೆ ಸಿಗ್ನಲ್ ಅಳವಡಿಸಿದ್ದರು. ಇದು ಬೆಂಗಳೂರಿನ ಮೊದಲ ಟ್ರಾಫಿಕ್ ಸಿಗ್ನಲ್ ಆಗಿದೆ. ಬಿ.ಎನ್.ಗರುಡಾಚಾರ್ ಅವರು ವಿವಿಧ ಜಿಲ್ಲೆಗಳಲ್ಲಿ ಪೆÇಲೀಸ್ ವರಿμÁ್ಠಧಿಕಾರಿಯಾಗಿ, ಬೆಂಗಳೂರು ಮಹಾನಗರ ಡಿಸಿಪಿ, ಬೆಂಗಳೂರು ನಗರ ಪೆÇಲೀಸ್ ಕಮಿಷನರ್ ಆಗಿ ಸೇವೆ ಸಲ್ಲಿಸಿದ್ದರು. ನಂತರ ಡಿಜಿ-ಐಜಿಪಿಯಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು ಎಂದಿದ್ದಾರೆ.
ಮೃತರ ಕುಟುಂಬಕ್ಕೆ, ಬಂಧುಮಿತ್ರರು ಮತ್ತು ಅಭಿಮಾನಿಗಳಿಗೆ ಅಗಲುವಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.
(ಕರುಣಾಕರ ಖಾಸಲೆ)
ಮಾಧ್ಯಮ ಸಂಚಾಲಕರು
ಬಿಜೆಪಿ ಕರ್ನಾಟಕ
To Write Comment Please लॉगिन