
14-4-2025
ಪ್ರಕಟಣೆಯ ಕೃಪೆಗಾಗಿ
ಬ್ಯಾಂಕ್ ಜನಾರ್ಧನ್ ಅವರ ನಿಧನಕ್ಕೆ ವಿಜಯೇಂದ್ರ ಸಂತಾಪ
ಬೆಂಗಳೂರು: ಕನ್ನಡ ಚಲನಚಿತ್ರ ರಂಗದ ಹಿರಿಯ ನಟ ಬ್ಯಾಂಕ್ ಜನಾರ್ಧನ್ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ನೂರಾರು ಚಲನಚಿತ್ರಗಳು, ಧಾರಾವಾಹಿಗಳಲ್ಲಿ ನಟಿಸಿದ್ದ ಅವರು ರಂಗಭೂಮಿಯಲ್ಲಿ ತೊಡಗಿಸಿಕೊಂಡಿದ್ದರು. ಅಲ್ಲದೇ, ಹಾಸ್ಯ ನಟರಾಗಿ ತಮ್ಮದೇ ಆದ ಛಾಪು ಮೂಡಿಸಿದವರು ಎಂದು ತಿಳಿಸಿದ್ದಾರೆ.
ಮೃತರ ಕುಟುಂಬಕ್ಕೆ ಬಂಧುಮಿತ್ರರು ಮತ್ತು ಅಭಿಮಾನಿಗಳಿಗೆ ಅಗಲುವಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.
(ಕರುಣಾಕರ ಖಾಸಲೆ)
ಮಾಧ್ಯಮ ಸಂಚಾಲಕರು
ಬಿಜೆಪಿ ಕರ್ನಾಟಕ
To Write Comment Please लॉगिन