Congress party will definitely go home in 2028: Jagadish Shettar


16-04-2025
Press Release

Download Document

16-4-2025

 

ಪ್ರಕಟಣೆಯ ಕೃಪೆಗಾಗಿ

 

2028ರಲ್ಲಿ ಕಾಂಗ್ರೆಸ್ ಪಕ್ಷ ಮನೆಗೆ ಹೋಗುವುದು ನಿಶ್ಚಿತ: ಜಗದೀಶ್ ಶೆಟ್ಟರ್

ಬೆಳಗಾವಿ: ಡಾ. ಬಾಬಾಸಾಹೇಬ ಅಂಬೇಡ್ಕರರ ಹೆಸರಿನ ಪ್ರಶಸ್ತಿ ಕೊಡುವುದರಲ್ಲಿ ಭ್ರಷ್ಟಾಚಾರ ನಡೆದಿದೆ; ಹಣ ವಸೂಲಿ ಮಾಡಿದ್ದಾರೆ ಎಂದು ಸಾಹಿತಿಯೊಬ್ಬರು ಹೇಳಿದ್ದಾರೆ. ರಾಜ್ಯದಲ್ಲಿರುವುದು ನಾಚಿಕೆ ಪಡುವಂಥ ಸರಕಾರ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಜಗದೀಶ್ ಶೆಟ್ಟರ್ ಅವರು ಟೀಕಿಸಿದ್ದಾರೆ.

ಇಲ್ಲಿ ಇಂದು ನಡೆದ ಜನಾಕ್ರೋಶ ಯಾತ್ರೆ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ನಮ್ಮ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಹೋರಾಟ ಮಾಡುತ್ತಿದೆ. ಎಲ್ಲ ಕಡೆ ಜನಾಕ್ರೋಶ ಹೆಚ್ಚಾಗಿದೆ. 2028ರಲ್ಲಿ ಕಾಂಗ್ರೆಸ್ ಪಕ್ಷ ಮನೆಗೆ ಹೋಗುವುದು ನಿಶ್ಚಿತ. ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇವತ್ತು ಅಭಿವೃದ್ಧಿ ಕೆಲಸ ಕಾರ್ಯಗಳಿಲ್ಲ. ಎಲ್ಲವೂ ನಿಂತು ಹೋಗಿವೆ. ಕೇವಲ ಭ್ರಷ್ಟಾಚಾರದ ಸರಕಾರವಿದು. ರಾಜಕೀಯದಲ್ಲಿ ತಮ್ಮ ಕೊನೆಯ ಹಂತದ ಕ್ಷಣಗಳೆಂದು ಸಿದ್ದರಾಮಯ್ಯನವರು ಭಾವಿಸಿರಬೇಕು. ಡಿಕೆ ಶಿವಕುಮಾರ್ ಕಾದುಕೊಂಡು ನಿಂತಿದ್ದಾರೆ. ಇನ್ನು ನವೆಂಬರೋ, ಡಿಸೆಂಬರೋ ಎಂದು ಸಿದ್ದರಾಮಯ್ಯನವರಿಗೆ ಕನಸು ಬೀಳುತ್ತಿರಬೇಕು ಎಂದು ವ್ಯಂಗ್ಯವಾಡಿದರು.

ಕಾಂಗ್ರೆಸ್ಸಿನಲ್ಲಿ ಒಳಜಗಳ, ಪ್ರಾಕ್ಸಿ ಯುದ್ಧ ನಡೆದಿದೆ. ಸಿದ್ದರಾಮಯ್ಯರನ್ನು ಇಳಿಸಬೇಕೆಂದು ಕೆಲವರು, ಮುಂದುವರೆಸಬೇಕೆಂದು ಕೆಲವರು ಪ್ರಯತ್ನ ಮಾಡುತ್ತಿದ್ದಾರೆ. ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಮಾಡಬೇಕೆಂದು ಕೆಲ ಶಾಸಕರು ಹೇಳುತ್ತಿದ್ದಾರೆ ಎಂದು ವಿವರಿಸಿದರು.

 

(ಕರುಣಾಕರ ಖಾಸಲೆ)

ಮಾಧ್ಯಮ ಸಂಚಾಲಕರು

ಬಿಜೆಪಿ ಕರ್ನಾಟಕ

To Write Comment Please लॉगिन