
5-5-2025
ಪ್ರಕಟಣೆಯ ಕೃಪೆಗಾಗಿ
ರಾಜ್ಯದಲ್ಲಿರುವ ಪಾಕಿಸ್ತಾನ ಪ್ರಜೆಗಳನ್ನು ವಾಪಸ್ಸು ಕಳುಹಿಸಲು ಆಗ್ರಹಿಸಿ ಸಹಿ ಸಂಗ್ರಹ ಅಭಿಯಾನ
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿರುವ ಪಾಕಿಸ್ತಾನಿ ಪ್ರಜೆಗಳನ್ನು ಕೂಡಲೇ ಕರ್ನಾಟಕದಿಂದ ತೆರವು ಮಾಡುವಂತೆ ಆಗ್ರಹಿಸುವ ಮನವಿಪತ್ರವನ್ನು ಮಾನ್ಯ ರಾಜ್ಯಪಾಲರಿಗೆ ಸಲ್ಲಿಸಲು, ಈ ಸಹಿ ಸಂಗ್ರಹ ಅಭಿಯಾನಕ್ಕೆ ಕೇಂದ್ರ ಸಚಿವೆ ಕು. ಶೋಭಾ ಕರಂದ್ಲಾಜೆ ಹಾಗೂ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಇಂದು ಮಲ್ಲೇಶ್ವರದಲ್ಲಿರುವ ಆಟೋ ಚಾಲಕರು, ಬೀದಿ ಬದಿ ವ್ಯಾಪಾರಿಗಳ ಬಳಿ ತೆರಳಿ ಸಹಿ ಸಂಗ್ರಹ ಮಾಡಿ ಅಭಿಯಾನಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಪ್ರಕೋಷ್ಠಗಳ ರಾಜ್ಯ ಸಂಯೋಜಕ ಎಸ್. ದತ್ತಾತ್ರಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ರಾಜ್ಯ ಮಾಧ್ಯಮ ಸಂಚಾಲಕ ಕರುಣಾಕರ್ ಖಾಸಲೆ, ಸಹ ಸಂಚಾಲಕ ಪ್ರಶಾಂತ್ ಕೆಡೆÀಂಜಿ, ಹಾಲು ಪ್ರಕೋಷ್ಠದ ರಾಜ್ಯ ಸಂಚಾಲಕ ರಾಘವೇಂದ್ರ ಶೆಟ್ಟಿ, ಬಿ. ನಾಗೇಶ್, ಡಿ.ಟಿ. ವಿಜೇಂದ್ರ, ಶರತ್ ಹೆಗಡೆ, ವೆಂಕಟಪ್ರಸಾದ್ ಮಾಲೆಪಾಟಿ, ಜಿಲ್ಲಾ ಸಹ ವಕ್ತಾರರಾದ ಕಾಂತಿ ಶೆಟ್ಟಿ,ಹಾಗೂ ಬಿಜೆಪಿ ಜಿಲ್ಲೆ ಮತ್ತು ಮಂಡಲ ಪ್ರಮುಖರು ಉಪಸ್ಥಿತರಿದ್ದರು.
(ಕರುಣಾಕರ ಖಾಸಲೆ)
ಮಾಧ್ಯಮ ಸಂಚಾಲಕರು
ಬಿಜೆಪಿ ಕರ್ನಾಟಕ
To Write Comment Please लॉगिन