
22-03-2025
"ಬಿಹಾರ್ ದಿವಸ್" ಕಾರ್ಯಕ್ರಮಕ್ಕೆ ಆಹ್ವಾನ
ಬೆಂಗಳೂರು: "ಬಿಹಾರ್ ದಿವಸ್" ಆಚರಣೆಯನ್ನು 22.3.2025 ರ ಸಂಜೆ 6.00 ಗಂಟೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿರುವ ಗೇಟ್ ನಂ.5 ರ 'ಕಿಂಗ್ಸ್ ಕೋರ್ಟ್' ಆವರಣದಲ್ಲಿ ಆಯೋಜಿಸಲಾಗಿದೆ.
ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಶಾಸಕರಾದ ಶ್ರೀ ಬಿ.ವೈ. ವಿಜಯೇಂದ್ರ , ಬಿಹಾರ ನವಾಡಾ ಸಂಸದರಾದ ಶ್ರೀ ವಿವೇಕ್ ಠಾಕೂರ್, ಬಿಜೆಪಿ ರಾಜ್ಯ ಉಪಾಧ್ಯಕ್ಷರು ಹಾಗೂ ಬಿಹಾರ ದಿವಸ್ ಉಸ್ತುವಾರಿಯಾದ ಶ್ರೀ ಮುರುಗೇಶ್ ನಿರಾಣಿ , ಕೇಂದ್ರ ಸಚಿವರಾದ ಕು. ಶೋಭಾ ಕರಂದ್ಲಾಜೆ , ಮಾಜಿ ಉಪಮುಖ್ಯಮಂತ್ರಿಗಳಾದ ಡಾ. ಸಿ.ಎನ್. ಅಶ್ವತ್ಥನಾರಾಯಣ್ , ಬೆಂಗಳೂರು ಕೇಂದ್ರ ಸಂಸದರಾದ ಶ್ರೀ ಪಿ.ಸಿ ಮೋಹನ್ , ಬೆಂಗಳೂರು ದಕ್ಷಿಣ ಸಂಸದರು ಹಾಗೂ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ತೇಜಸ್ವಿ ಸೂರ್ಯ ಮತ್ತು ಪ್ರಕೋಷ್ಠಗಳ ರಾಜ್ಯ ಸಂಯೋಜಕರು ಶ್ರೀ ಎಸ್. ದತ್ತಾತ್ರಿ ಅವರು ಭಾಗವಹಿಸಲಿದ್ದಾರೆ ಹಾಗೂ ಬೆಂಗಳೂರಿನಲ್ಲಿರುವ ಬಿಹಾರ ರಾಜ್ಯದ ನಿವಾಸಿಗಳು ಕುಟುಂಬ ಸದಸ್ಯರೊಂದಿಗೆ ಇದರಲ್ಲಿ ಪಾಲ್ಗೊಳ್ಳಲಿದ್ದಾರೆ.
ತಮ್ಮ ಪತ್ರಿಕೆಯ ವರದಿಗಾರರು, ಛಾಯಾಗ್ರಾಹಕರು ಮತ್ತು ಟಿ.ವಿ. ಮಾಧ್ಯಮಗಳ ವರದಿಗಾರರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿ ವಿನಂತಿ.
(ಕರುಣಾಕರ ಖಾಸಲೆ)
ಮಾಧ್ಯಮ ಸಂಚಾಲಕರು
ಬಿಜೆಪಿ ಕರ್ನಾಟಕ
To Write Comment Please Login