
5-4-2025
‘ಬಿಜೆಪಿ ಸ್ಥಾಪನಾ ದಿವಸ’ ಕಾರ್ಯಕ್ರಮಕ್ಕೆ ಆಹ್ವಾನ
ಬೆಂಗಳೂರು: ಬಿಜೆಪಿ ಸ್ಥಾಪನಾ ದಿವಸ ದ ಅಂಗವಾಗಿ ಧ್ವಜಾರೋಹಣ, ಪ್ರದರ್ಶಿನಿ ಉದ್ಘಾಟನೆ ಮತ್ತು ಸಭಾಕಾರ್ಯಕ್ರಮವು ನಾಳೆ 6.4.2025 ರ ಬೆಳಿಗ್ಗೆ 09.30 ಗಂಟೆಗೆ ಗಂಟೆಗೆ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ” ದಲ್ಲಿ ಆರಂಭವಾಗಲಿದೆ.
ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಶಾಸಕರಾದ ಶ್ರೀ ಬಿ.ವೈ. ವಿಜಯೇಂದ್ರ , ಮಾಜಿ ಮುಖ್ಯಮಂತ್ರಿಗಳು ಮತ್ತು ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯರಾದ ಶ್ರೀ ಬಿ.ಎಸ್. ಯಡಿಯೂರಪ್ಪ , ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಡಿ.ವಿ. ಸದಾನಂದ ಗೌಡ , ಮಾಜಿ ಉಪಮುಖ್ಯಮಂತ್ರಿಗಳು ಹಾಗೂ ಶಾಸಕರಾದ ಡಾ. ಸಿ.ಎನ್. ಅಶ್ವತ್ಥನಾರಾಯಣ್ , ಬೆಂಗಳೂರು ಕೇಂದ್ರ ಸಂಸದರಾದ ಶ್ರೀ ಪಿ.ಸಿ ಮೋಹನ್ , ಕಾರ್ಯಕ್ರಮದ ಸಂಚಾಲಕರು ಮತ್ತು ವಿಧಾನ ಪರಿಷತ್ತಿನ ಸದಸ್ಯರಾದ ಶ್ರೀಮತಿ ಭಾರತಿ ಶೆಟ್ಟಿ ಹಾಗೂ ಪಕ್ಷದ ಮುಖಂಡರುಗಳು ಭಾಗವಹಿಸಲಿದ್ದಾರೆ.
ತಮ್ಮ ಪತ್ರಿಕೆಯ ವರದಿಗಾರರು, ಛಾಯಾಗ್ರಾಹಕರು ಮತ್ತು ಟಿ.ವಿ. ಮಾಧ್ಯಮಗಳ ವರದಿಗಾರರು ಈ ಸಂದರ್ಭದಲ್ಲಿ ಭಾಗವಹಿಸಲು ಕೋರಲಾಗಿದೆ.
(ಕರುಣಾಕರ ಖಾಸಲೆ)
ರಾಜ್ಯ ಮಾಧ್ಯಮ ಸಂಚಾಲಕರು
ಬಿಜೆಪಿ ಕರ್ನಾಟಕ
To Write Comment Please Login