
24-4-2025
ಪ್ರಕಟಣೆಯ ಕೃಪೆಗಾಗಿ
ಡಾ.ಅಂಬೇಡ್ಕರ್ ಕುರಿತ ಪ್ರದರ್ಶಿನಿ, ವಿಚಾರಗೋಷ್ಠಿ
ಬೆಂಗಳೂರು: ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ವಿಚಾರ ಯಾತ್ರೆಯ ಪ್ರದರ್ಶಿನಿ ಉದ್ಘಾಟನೆ ಮತ್ತು ʼಕಾಂಗ್ರೆಸ್ ಒಂದು ಸುಡುವ ಮನೆ ಎಚ್ಚರ! ಬಾಬಾಸಾಹೇಬರು ಹೀಗೇಕೆ ಹೇಳಿದರು?” ಎಂಬ ವಿಚಾರಗೋಷ್ಠಿ ನಡೆಯಿತು. ಬಿಜೆಪಿ ಆಂಧ್ರಪ್ರದೇಶ ರಾಜ್ಯಾಧ್ಯಕ್ಷರಾದ ಶ್ರೀಮತಿ ದಗ್ಗುಬಾಟಿ ಪುರಂದೇಶ್ವರಿ ಅವರು ಉದ್ಘಾಟಿಸಿದರು.
ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್. ಮಹೇಶ್, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್, ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷರಾದ ಕು. ಸಿ. ಮಂಜುಳಾ, ವಿಧಾನಪರಿಷತ್ ಸದಸ್ಯರಾದ ಶ್ರೀಮತಿ ಹೇಮಲತಾ ನಾಯಕ್, ಮಾಜಿ ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನಿ, ಮಹಿಳಾ ಮೋರ್ಚಾ ಪದಾಧಿಕಾರಿಗಳು ಮತ್ತು ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
(ಕರುಣಾಕರ ಖಾಸಲೆ)
ಮಾಧ್ಯಮ ಸಂಚಾಲಕರು
ಬಿಜೆಪಿ ಕರ್ನಾಟಕ
To Write Comment Please Login