ಇಸ್ರೊ ಮಾಜಿ ಅಧ್ಯಕ್ಷ ಕೆ.ಕಸ್ತೂರಿರಂಗನ್ ಅವರ ನಿಧನಕ್ಕೆ ವಿಜಯೇಂದ್ರ ಸಂತಾಪ


25-04-2025
Press Release

Download Document

25-4-2025

 

ಪ್ರಕಟಣೆಯ ಕೃಪೆಗಾಗಿ

 

ಇಸ್ರೊ ಮಾಜಿ ಅಧ್ಯಕ್ಷ ಕೆ.ಕಸ್ತೂರಿರಂಗನ್ ಅವರ ನಿಧನಕ್ಕೆ ವಿಜಯೇಂದ್ರ ಸಂತಾಪ

ಬೆಂಗಳೂರು: ಇಸ್ರೊ ಮಾಜಿ ಅಧ್ಯಕ್ಷ ಕೆ.ಕಸ್ತೂರಿರಂಗನ್ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ (ಎನ್‍ಇಪಿ) ಕರಡು ಸಮಿತಿಯ ಅಧ್ಯಕ್ಷರಾಗಿದ್ದ ಅವರು, ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಕುಲಪತಿ ಮತ್ತು ಕರ್ನಾಟಕ ಜ್ಞಾನ ಆಯೋಗದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಅಲ್ಲದೆ, ರಾಜ್ಯಸಭೆಯ ಸದಸ್ಯರಾಗಿ, ಯೋಜನಾ ಆಯೋಗದ ಸದಸ್ಯರಾಗಿಯೂ ಕೆಲಸ ಮಾಡಿದ್ದರು ಎಂದು ಅವರು ತಿಳಿಸಿದ್ದಾರೆ.

ಮೃತರ ಕುಟುಂಬಕ್ಕೆ ಬಂಧುಮಿತ್ರರು ಮತ್ತು ಅಭಿಮಾನಿಗಳಿಗೆ ಅಗಲುವಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.

 

(ಕರುಣಾಕರ ಖಾಸಲೆ)

ಮಾಧ್ಯಮ ಸಂಚಾಲಕರು

ಬಿಜೆಪಿ ಕರ್ನಾಟಕ

To Write Comment Please Login