
7-5-2025
ಪ್ರಕಟಣೆಯ ಕೃಪೆಗಾಗಿ
ಕೋಲಾರದ ಶ್ರೀ ಕೋಲಾರಮ್ಮ ದೇವಸ್ಥಾನದಲ್ಲಿ ಪೂಜೆ, ಪ್ರಾರ್ಥನೆ
ಕಾಂಗ್ರೆಸ್ಸಿನ ದೇಶವಿರೋಧಿ ನೀತಿಯಿಂದ ಪಾಕ್ ಉಗ್ರಗಾಮಿಗಳ ಅಟ್ಟಹಾಸ: ವಿಜಯೇಂದ್ರ
ಕೋಲಾರ: ಪ್ರಧಾನಿ ನರೇಂದ್ರ ಮೋದಿಜೀ ಅವರು ಪಾಕಿಸ್ತಾನ ಮತ್ತು ಅಲ್ಲಿನ ಉಗ್ರರ ಅಟ್ಟಹಾಸಕ್ಕೆ ಪ್ರತೀಕಾರಕ್ಕೆ ದಿಟ್ಟ ಉತ್ತರ ನೀಡಲು ಮುಂದಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಮೆಚ್ಚುಗೆ ಸೂಚಿಸಿದರು.
ಕೋಲಾರದ ಶ್ರೀ ಕೋಲಾರಮ್ಮ ದೇವಸ್ಥಾನದಲ್ಲಿ ಇಂದು ಭಾರತೀಯ ಯೋಧರ ಗೆಲುವಿಗಾಗಿ ಪ್ರಾರ್ಥಿಸಿ ಪೂಜೆ ಸಲ್ಲಿಸಿದ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪಾಕಿಸ್ತಾನದ ಉಗ್ರರ ಅಡಗುದಾಣಗಳ ಮೇಲೆ ನಿನ್ನೆಯಿಂದ ದಾಳಿ ಆರಂಭವಾಗಿದೆ. ನಮ್ಮ ಯೋಧರಿಗೆ ಹೋರಾಟದಲ್ಲಿ ಯಶಸ್ಸು ಸಿಗಲೆಂದು ಪ್ರಾರ್ಥನೆ ಸಲ್ಲಿಸಿದ್ದಾಗಿ ತಿಳಿಸಿದರು.
ಕಾಂಗ್ರೆಸ್ಸಿನ ದ್ವಂದ್ವ ನೀತಿ ಮತ್ತು ದೇಶವಿರೋಧಿ ನೀತಿಯಿಂದ ಉಗ್ರಗಾಮಿಗಳು ಅಟ್ಟಹಾಸದಿಂದ ಮೆರೆಯುವಂತಾಗಿದೆ ಎಂದು ಅವರು ಪ್ರಶ್ನೆಗೆ ಉತ್ತರ ನೀಡಿದರು. ಕಾಂಗ್ರೆಸ್ಸಿನ ಇದೇ ನೀತಿಯಿಂದ ಜಮ್ಮು- ಕಾಶ್ಮೀರದ ಸಾವಿರಾರು ಹಿಂದೂಗಳು ಮನೆಮಠವನ್ನು ಕಳಕೊಳ್ಳುವಂತಾಯಿತು. ಅಲ್ಲದೇ, ಸಾವಿರಾರು ಯೋಧರು ಪ್ರಾಣ ಕಳಕೊಳ್ಳಬೇಕಾಯಿತು ಎಂದು ಟೀಕಿಸಿದರು.
ಪ್ರಧಾನಿ ನರೇಂದ್ರ ಮೋದಿಜೀ ಅವರ ದಿಟ್ಟ ನಾಯಕತ್ವವು ನಮ್ಮ ಯೋಧರಿಗೆ ದೊಡ್ಡ ಶಕ್ತಿಯನ್ನು ತಂದು ಕೊಟ್ಟಿದೆ. ಉಗ್ರರ ವಿರುದ್ಧ ಮತ್ತು ಪಾಕಿಸ್ತಾನದ ವಿರುದ್ಧ ನಡೆಯುವ ಹೋರಾಟದಲ್ಲಿ ನಮ್ಮ ಯೋಧರಿಗೆ ಯಶಸ್ಸು ಸಿಗುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ, ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್, ಬಿಜೆಪಿ ರಾಜ್ಯ ಉಪಾಧ್ಯಕ್ಷ ಮತ್ತು ಶಾಸಕ ಭೈರತಿ ಬಸವರಾಜ್, ಮಾಜಿ ಸಚಿವ ಬಿ. ಶ್ರೀರಾಮುಲು, ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ, ಮಾಜಿ ಸಂಸದ ಎಸ್. ಮುನಿಸ್ವಾಮಿ, ಕೋಲಾರ ಜಿಲ್ಲಾಧ್ಯಕ್ಷ ಓಂ ಶಕ್ತಿ ಛಲಪತಿ ಮತ್ತು ಪಕ್ಷದ ಮುಖಂಡರು ಪಾಲ್ಗೊಂಡಿದ್ದರು.
(ಕರುಣಾಕರ ಖಾಸಲೆ)
ಮಾಧ್ಯಮ ಸಂಚಾಲಕರು
ಬಿಜೆಪಿ ಕರ್ನಾಟಕ
To Write Comment Please Login