
9-5-2025
ಪ್ರಕಟಣೆಯ ಕೃಪೆಗಾಗಿ
ಪಾಕಿಸ್ತಾನದ ಪ್ರಜೆಗಳನ್ನು ರಾಜ್ಯದಿಂದ ವಾಪಸ್ ಕಳಿಸಲು ಮನವಿ
ಬೆಂಗಳೂರು: ಪಾಕಿಸ್ತಾನದ ಪ್ರಜೆಗಳನ್ನು ರಾಜ್ಯದಿಂದ ವಾಪಸ್ ಕಳಿಸಬೇಕೆಂದು ರಾಜ್ಯ ಸರಕಾರಕ್ಕೆ ಸೂಚನೆ ನೀಡಬೇಕೆಂದು ಮಾನ್ಯ ರಾಜ್ಯಪಾಲರಿಗೆ ಇಂದು ಬಿಜೆಪಿ ನಿಯೋಗವು ಮನವಿ ಸಲ್ಲಿಸಿತು.
ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರ ನೇತೃತ್ವದ ಬಿಜೆಪಿ ನಿಯೋಗವು ಈ ಕುರಿತಂತೆ ಸಂಗ್ರಹಿತ ಸಹಿಗಳುಳ್ಳ ಮನವಿಯನ್ನು ಸಲ್ಲಿಸಿತು. ಬಿಜೆಪಿ ಈ ನಿಟ್ಟಿನಲ್ಲಿ ರಾಜ್ಯದಾದ್ಯಂತ ಸಹಿ ಸಂಗ್ರಹ ಅಭಿಯಾನವನ್ನೂ ಆಯೋಜಿಸಿತ್ತು.
ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ್, ಶಾಸಕ ವೇದವ್ಯಾಸ ಕಾಮತ್, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ವಿಧಾನಪರಿಷತ್ ಸದಸ್ಯರಾದ ಗೋಪಿನಾಥ್ ರೆಡ್ಡಿ, ಪ್ರತಾಪಸಿಂಹ ನಾಯಕ್, ಪ್ರಕೋಷ್ಠಗಳ ರಾಜ್ಯ ಸಂಯೋಜಕ ಎಸ್. ದತ್ತಾತ್ರೀ, ಹಾಲು ಉತ್ಪಾದಕರ ಪ್ರಕೋಷ್ಠದ ರಾಜ್ಯ ಸಂಚಾಲಕ ಬೇಳೂರು ರಾಘವೇಂದ್ರ ಶೆಟ್ಟಿ, ಕಾನೂನು ಪ್ರಕೋಷ್ಠದ ರಾಜ್ಯ ಸಂಚಾಲಕ ವಸಂತ ಕುಮಾರ್, ಶಿಕ್ಷಣ ಪ್ರಕೋಷ್ಠದ ರಾಜ್ಯ ಸಂಚಾಲಕ ಡಾ. ಸಿ.ಬಿ. ಶಶಿಧರ್, ವಿಧಾನಪರಿಷತ್ ಸದಸ್ಯ ಬಿ.ಜಿ. ಪಾಟೀಲ್, ವ್ಯಾಪಾರ ಮತ್ತು ವಾಣಿಜ್ಯ ಪ್ರಕೋಷ್ಟದ ರಾಜ್ಯ ಸಂಚಾಲಕ ವಿಜಯ್ ಕುಮಾರ್, ರಾಜ್ಯ ಮಾಧ್ಯಮ ಸಹ-ಸಂಚಾಲಕ ಪ್ರಶಾಂತ್ ಕೆಡಂಜಿ ಮತ್ತು ಪಕ್ಷದ ಮುಖಂಡರು ಉಪಸ್ಥಿತರಿದ್ದರು.
(ಕರುಣಾಕರ ಖಾಸಲೆ)
ಮಾಧ್ಯಮ ಸಂಚಾಲಕರು
ಬಿಜೆಪಿ ಕರ್ನಾಟಕ
To Write Comment Please Login