
11-3-2025
ಪತ್ರಿಕಾ ಆಹ್ವಾನ
ಬೆಂಗಳೂರು: ಬಿಜೆಪಿ-ಜೆಡಿಎಸ್ ಪಕ್ಷಗಳ ಪ್ರತಿಭಟನೆಯು ನಾಳೆ 12-3-2025 ರ ಬೆಳಿಗ್ಗೆ 10.00 ಗಂಟೆಗೆ ಬೆಂಗಳೂರಿನ ವಿಧಾನ ಸೌಧದ ಕೆಂಗಲ್ ಹನುಮಂತಯ್ಯ ಪ್ರತಿಮೆ ಬಳಿ ನಡೆಯಲಿದೆ.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಶಾಸಕರಾದ ಶ್ರೀ ಬಿ.ವೈ. ವಿಜಯೇಂದ್ರ , ವಿರೋಧ ಪಕ್ಷದ ನಾಯಕರಾದ ಶ್ರೀ ಆರ್. ಅಶೋಕ್ , ವಿಧಾನಪರಿಷತ್ ವಿಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ , ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಶ್ರೀ ಸುರೇಶ್ ಬಾಬು , ಜೆಡಿಎಸ್ ವಿಧಾನ ಪರಿಷತ್ತಿನ ನಾಯಕರಾದ ಶ್ರೀ ಬೋಜೆಗೌಡ ಮತ್ತು ಬಿಜೆಪಿ-ಜೆಡಿಎಸ್‍ನ ಶಾಸಕರುಗಳು ಹಾಗೂ ವಿಧಾನ ಪರಿಷತ್ತಿನ ಸದಸ್ಯರುಗಳು ಭಾಗವಹಿಸಲಿದ್ದಾರೆ.
ತಮ್ಮ ಪತ್ರಿಕೆಯ ವರದಿಗಾರರು, ಛಾಯಾಗ್ರಾಹಕರು ಮತ್ತು ಟಿ.ವಿ. ಮಾಧ್ಯಮಗಳ ವರದಿಗಾರರು ಈ ಸಂದರ್ಭದಲ್ಲಿ ಭಾಗವಹಿಸಬೇಕಾಗಿ ವಿನಂತಿ.
(ಕರುಣಾಕರ ಖಾಸಲೆ)
ರಾಜ್ಯ ಮಾಧ್ಯಮ ಸಂಚಾಲಕರು
ಬಿಜೆಪಿ ಕರ್ನಾಟಕ
To Write Comment Please Login