
13-3-2025
ಪತ್ರಿಕಾ ಆಹ್ವಾನ
ಬೆಂಗಳೂರು: ಕಾಂಗ್ರೆಸ್ ಸರ್ಕಾರದಿಂದ ಶಿಕ್ಷಣ ಕ್ಷೇತ್ರಕ್ಕಾಗುತ್ತಿರುವ ನಿರ್ಲಕ್ಷ್ಯದ ವಿರುದ್ಧ ಚಿಂತನಾ ಸಭೆ ಯು ಇಂದು 13-3-2025 ರ ಸಂಜೆ 06.00 ಗಂಟೆಗೆ ಬೆಂಗಳೂರಿನ ಕ್ಯಾಪಿಟಲ್ ಹೋಟಲ್ ನಲ್ಲಿ ನಡೆಯಲಿದೆ.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಶಾಸಕರಾದ ಶ್ರೀ ಬಿ.ವೈ. ವಿಜಯೇಂದ್ರ , ವಿಧಾನಪರಿಷತ್ ವಿಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ , ಮಾಜಿ ಉಪಮುಖ್ಯಮಂತ್ರಿಗಳಾದ ಡಾ. ಸಿ.ಎನ್. ಅಶ್ವತ್ಥನಾರಾಯಣ್ , ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಶ್ರೀ ಎನ್. ಮಹೇಶ್ , ವಿಧಾನ ಪರಿಷತ್ತಿನ ಮುಖ್ಯ ಸಚೇತಕರಾದ ಶ್ರೀ ಎನ್. ರವಿಕುಮಾರ್ , ವಿಧಾನಪರಿಷತ್ ಸದಸ್ಯರಾದ ಶ್ರೀ ಸಿ.ಟಿ. ರವಿ , ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರುಗಳು, ಶಿಕ್ಷಣ ತಜ್ಞರುಗಳು, ಶಿಕ್ಷಣ ಪ್ರಕೋಷ್ಠದ ಎಲ್ಲಾ ಸದಸ್ಯರು ಗಳು ಭಾಗವಹಿಸಲಿದ್ದಾರೆ.
ತಮ್ಮ ಪತ್ರಿಕೆಯ ವರದಿಗಾರರು, ಛಾಯಾಗ್ರಾಹಕರು ಮತ್ತು ಟಿ.ವಿ. ಮಾಧ್ಯಮಗಳ ವರದಿಗಾರರು ಈ ಸಂದರ್ಭದಲ್ಲಿ ಭಾಗವಹಿಸಬೇಕಾಗಿ ವಿನಂತಿ.
( ಕರುಣಾಕರ ಖಾಸಲೆ )
ರಾಜ್ಯ ಮಾಧ್ಯಮ ಸಂಚಾಲಕರು
ಬಿಜೆಪಿ ಕರ್ನಾಟಕ
To Write Comment Please Login