
9-4-2025
ಪತ್ರಿಕಾ ಆಹ್ವಾನ
ಚಿಕ್ಕಮಗಳೂರು: ಕಾಂಗ್ರೆಸ್ ಸರ್ಕಾರದ ವಿರುದ್ಧ ನಡೆಸುತ್ತಿರುವ ‘ಜನಾಕ್ರೋಶ ಯಾತ್ರೆ’ ಸಂಬಂಧ 10.4.2025ರ ಗುರುವಾರ ಸಂಜೆ 4.00 ಗಂಟೆಗೆ “ಬಸವನಹಳ್ಳಿ ಮುಖ್ಯ ರಸ್ತೆಯ ಶಂಕರಮಠ ದಿಂದ ಪ್ರಾರಂಭಗೊಂಡು ಹನುಮಂತಪ್ಪ ಸರ್ಕಲ್, ಎಂ.ಜಿ. ರಸ್ತೆಯ ಆಜಾದ್ ಪಾರ್ಕ್” ನಲ್ಲಿ ಸಮಾವೇಶ ನಡೆಯಲಿದೆ.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಶಾಸಕರಾದ ಶ್ರೀ ಬಿ.ವೈ. ವಿಜಯೇಂದ್ರ , ವಿರೋಧ ಪಕ್ಷದ ನಾಯಕರಾದ ಶ್ರೀ ಆರ್. ಅಶೋಕ್ , ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ , ಸಂಸದರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿ , ವಿಧಾನಪರಿಷತ್ ಸದಸ್ಯರಾದ ಶ್ರೀ ಸಿ.ಟಿ. ರವಿ , ವಿಧಾನಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಶ್ರೀ ಎನ್. ರವಿಕುಮಾರ್ , ಮಾಜಿ ಸಚಿವರಾದ ಶ್ರೀ ಡಿ.ಎನ್. ಜೀವರಾಜ್ , ಮಾಜಿ ಶಾಸಕರಾದ ಶ್ರೀ ಬೆಳ್ಳಿ ಪ್ರಕಾಶ್ , ಶ್ರೀ ಡಿ.ಎಸ್. ಸುರೇಶ್ , ವಿಧಾನಪರಿಷತ್ ಸದಸ್ಯರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು , ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಹೆಚ್.ಸಿ. ಕಲ್ಮರುಡಪ್ಪ , ಚಿಕ್ಕಮಗಳೂರು ಜಿಲ್ಲಾಧ್ಯಕ್ಷರಾದ ಶ್ರೀ ದೇವರಾಜ್ ಶೆಟ್ಟಿ , ಮುಖಂಡರಾದ ಶ್ರೀ ದೀಪಕ್ ದೊಡ್ಡಯ್ಯ ಮತ್ತು ಪಕ್ಷದ ಮುಖಂಡರುಗಳು ಪಾಲ್ಗೊಳ್ಳಲಿದ್ದಾರೆ.
ತಮ್ಮ ಪತ್ರಿಕೆಯ ವರದಿಗಾರರು, ಛಾಯಾಗ್ರಾಹಕರು ಮತ್ತು ಟಿ.ವಿ. ಮಾಧ್ಯಮಗಳ ವರದಿಗಾರರು ಈ ಸಂದರ್ಭದಲ್ಲಿ ಭಾಗವಹಿಸಲು ಕೋರಲಾಗಿದೆ.
(ಕರುಣಾಕರ ಖಾಸಲೆ)
ರಾಜ್ಯ ಮಾಧ್ಯಮ ಸಂಚಾಲಕರು
ಬಿಜೆಪಿ ಕರ್ನಾಟಕ
To Write Comment Please Login