
6-4-2025
ಪತ್ರಕರ್ತರಿಗೆ ಆಹ್ವಾನ
ಮೈಸೂರು: ಕಾಂಗ್ರೆಸ್ ಸರ್ಕಾರದ ವಿರುದ್ಧ ನಡೆಸುತ್ತಿರುವ 'ಜನಾಕ್ರೋಶ ಯಾತ್ರೆ' ಸಂಬಂಧ ನಾಳೆ 7-4-2025 ರಂದು ಮಧ್ಯಾಹ್ನ 03.15 ಗಂಟೆಗೆ ಚಾಮುಂಡೇಶ್ವರಿ ದೇವಸ್ಥಾನ ದಲ್ಲಿ ಪೂಜೆ ಸಲ್ಲಿಸಿ, ನಂತರ ಸಂಜೆ 4.00 ಗಂಟೆಗೆ ಜನಾಕ್ರೋಶ ಯಾತ್ರೆಯನ್ನು ಮೈಸೂರಿನ MDCC ಬ್ಯಾಂಕ್ ವೃತ್ತದಿಂದ(ಲಷ್ಕರ್ ಪೊಲೀಸ್ ಠಾಣೆ ಸರ್ಕಲ್) ಪ್ರಾರಂಭಗೊಳ್ಳಲಿದೆ. ಬಳಿಕ ಅಶೋಕ ರಸ್ತೆ ಮಾರ್ಗವಾಗಿ ಗಾಂಧಿ ಸ್ಕ್ವೇರ್ ಇಲ್ಲಿ ಬಹಿರಂಗ ಪ್ರತಿಭಟನಾ ಸಮಾವೇಶ ನಡೆಯಲಿದೆ.
ಈ ಜನಾಕ್ರೋಶ ಯಾತ್ರೆಯಲ್ಲಿ ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ , ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಶಾಸಕರಾದ ಶ್ರೀ ಬಿ.ವೈ. ವಿಜಯೇಂದ್ರ , ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಡಿ ವಿ ಸದಾನಂದಗೌಡ , ವಿರೋಧ ಪಕ್ಷದ ನಾಯಕರಾದ ಶ್ರೀ ಆರ್. ಅಶೋಕ್ , ವಿರೋಧ ಪಕ್ಷದ ವಿಧಾನ ಪರಿಷತ್ತಿನ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ , ಮಾಜಿ ಉಪಮುಖ್ಯಮಂತ್ರಿಗಳಾದ ಶ್ರೀ ಗೋವಿಂದ ಕಾರಜೋಳ , ಬಿಜೆಪಿ ಮಾಜಿ ರಾಜ್ಯಾಧ್ಯಕ್ಷರಾದ ಶ್ರೀ ನಳೀನ್‍ಕುಮಾರ್ ಕಟೀಲ್ , ಮಾಜಿ ಉಪಮುಖ್ಯಮಂತ್ರಿಗಳಾದ ಡಾ. ಸಿ.ಎನ್ ಅಶ್ವತ್ಥನಾರಾಯಣ್ , ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಶ್ರೀ ಎನ್. ರವಿಕುಮಾರ್ , ವಿಧಾನ ಪರಿಷತ್ತಿನ ಸದಸ್ಯರಾದ ಶ್ರೀ ಸಿ.ಟಿ ರವಿ , ಮಾಜಿ ಸಚಿವರಾದ ಶ್ರೀ ಬಿ. ಶ್ರೀರಾಮುಲು , ಸಂಸದರಾದ ಶ್ರೀ ಯದುವೀರ್ ಕೃಷ್ಣರಾಜದತ್ತ ಒಡೆಯರ್ , ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಶ್ರೀ ಮುರುಗೇಶ್ ನಿರಾಣಿ , ಶ್ರೀ ರಾಜೇಂದ್ರ ಹಾಗೂ ಶ್ರೀ ಎನ್ ಮಹೇಶ್ , ಶಾಸಕರಾದ ಶ್ರೀ ಭೈರತಿ ಬಸವರಾಜ್ ಹಾಗೂ ಶ್ರೀ ಟಿ ಎಸ್ ಶ್ರೀವತ್ಸ , ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಶ್ರೀ ಪ್ರೀತಮ್ ಗೌಡ , ಮಾಜಿ ಸಂಸದರಾದ ಶ್ರೀ ಪ್ರತಾಪ್ ಸಿಂಹ , ಮೈಸೂರು ನಗರ ಅಧ್ಯಕ್ಷರಾದ ಶ್ರೀ ಎಲ್ ನಾಗೇಂದ್ರ , ಚಾಮರಾಜನಗರ ಜಿಲ್ಲಾಧ್ಯಕ್ಷರಾದ ಶ್ರೀ ನಿರಂಜನ್ ಕುಮಾರ್ , ಮೈಸೂರು ಗ್ರಾಮಾಂತರ ಅಧ್ಯಕ್ಷರಾದ ಶ್ರೀ ಎಲ್ ಆರ್ ಮಹದೇವಸ್ವಾಮಿ , ಮುಂತಾದ ಅನೇಕ ಹಿರಿಯ ನಾಯಕರುಗಳು ಹಾಗೂ ಪಕ್ಷದ ಮುಖಂಡರುಗಳು ಪಾಲ್ಗೊಳ್ಳಲಿದ್ದಾರೆ.
ತಮ್ಮ ಪತ್ರಿಕೆಯ ವರದಿಗಾರರು, ಛಾಯಾಗ್ರಾಹಕರು ಮತ್ತು ಟಿ.ವಿ. ಮಾಧ್ಯಮಗಳ ವರದಿಗಾರರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿ ವಿನಂತಿ.
(ಕರುಣಾಕರ ಖಾಸಲೆ)
ರಾಜ್ಯ ಮಾಧ್ಯಮ ಸಂಚಾಲಕರು
ಬಿಜೆಪಿ ಕರ್ನಾಟಕ
To Write Comment Please Login