
7-4-2025
ಪತ್ರಕರ್ತರಿಗೆ ಆಹ್ವಾನ
ಮಂಡ್ಯ: ಕಾಂಗ್ರೆಸ್ ಸರ್ಕಾರದ ವಿರುದ್ಧ ನಡೆಸುತ್ತಿರುವ ‘ ಜನಾಕ್ರೋಶ ಯಾತ್ರೆ ’ ಸಂಬಂಧ ನಾಳೆ 8-4-2025 ರಂದು ಬೆಳಿಗ್ಗೆ 10.00 ಗಂಟೆಗೆ ಜನಾಕ್ರೋಶ ಯಾತ್ರೆಯು ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಬಳಿ ಇರುವ ‘ವಿಶ್ವೇಶ್ವರಯ್ಯ ಪ್ರತಿಮೆ’ ಬಳಿಯಿಂದ ಪ್ರಾರಂಭಗೊಳ್ಳಲಿದೆ. ನಂತರ ‘ ಸಿಲ್ವರ್ ಜುಬ್ಲಿ ಪಾರ್ಕ್ ’ ಇಲ್ಲಿ ಬಹಿರಂಗ ಪ್ರತಿಭಟನಾ ಸಮಾವೇಶ ನಡೆಯಲಿದೆ.
ಈ ಜನಾಕ್ರೋಶ ಯಾತ್ರೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಶಾಸಕರಾದ ಶ್ರೀ ಬಿ.ವೈ. ವಿಜಯೇಂದ್ರ , ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಡಿ ವಿ ಸದಾನಂದಗೌಡ , ವಿರೋಧ ಪಕ್ಷದ ನಾಯಕರಾದ ಶ್ರೀ ಆರ್. ಅಶೋಕ್ , ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ , ಮಾಜಿ ಉಪಮುಖ್ಯಮಂತ್ರಿಗಳಾದ ಶ್ರೀ ಗೋವಿಂದ ಕಾರಜೋಳ , ಬಿಜೆಪಿ ಮಾಜಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್ , ಮಾಜಿ ಉಪಮುಖ್ಯಮಂತ್ರಿಗಳಾದ ಡಾ. ಸಿ.ಎನ್ ಅಶ್ವತ್ಥನಾರಾಯಣ್ , ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಶ್ರೀ ಎನ್. ರವಿಕುಮಾರ್ , ವಿಧಾನ ಪರಿಷತ್ತಿನ ಸದಸ್ಯರಾದ ಶ್ರೀ ಸಿ.ಟಿ ರವಿ , ಮಾಜಿ ಸಚಿವರಾದ ಶ್ರೀ ಬಿ. ಶ್ರೀರಾಮುಲು , ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಶ್ರೀ ಪ್ರೀತಮ್ ಗೌಡ , ಮಂಡ್ಯ ಜಿಲ್ಲಾಧ್ಯಕ್ಷರಾದ ಡಾ. ಇಂದ್ರೇಶ್ , ಮುಖಂಡರುಗಳಾದ ಶ್ರೀ ಅಶೋಕ್ ಜಯರಾಮ್ , ಶ್ರೀ ಸಾದೊಳಲು ಸ್ವಾಮಿ , ಇಂಡವಾಳು ಶ್ರೀ ಸಚ್ಚಿದಾನಂದ, ಡಾ. ಸಿದ್ದರಾಮಯ್ಯ ಮುಂತಾದ ಅನೇಕ ಹಿರಿಯ ನಾಯಕರುಗಳು ಹಾಗೂ ಪಕ್ಷದ ಮುಖಂಡರುಗಳು ಪಾಲ್ಗೊಳ್ಳಲಿದ್ದಾರೆ.
ತಮ್ಮ ಪತ್ರಿಕೆಯ ವರದಿಗಾರರು, ಛಾಯಾಗ್ರಾಹಕರು ಮತ್ತು ಟಿ.ವಿ. ಮಾಧ್ಯಮಗಳ ವರದಿಗಾರರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿ ವಿನಂತಿ.
(ಕರುಣಾಕರ ಖಾಸಲೆ)
ರಾಜ್ಯ ಮಾಧ್ಯಮ ಸಂಚಾಲಕರು
ಬಿಜೆಪಿ ಕರ್ನಾಟಕ
To Write Comment Please Login