
7.5.2025
ಪ್ರಕಟಣೆಯ ಕೃಪೆಗಾಗಿ
ಸಾಹಿತಿ ಜಿ.ಎಸ್.ಸಿದ್ದಲಿಂಗಯ್ಯ ಅವರ ನಿಧನಕ್ಕೆ ವಿಜಯೇಂದ್ರ ಸಂತಾಪ
ಬೆಂಗಳೂರು: ಸಾಹಿತಿ, ಕವಿ ಹಾಗೂ ವಿಮರ್ಶಕರಾಗಿದ್ದ ಜಿ.ಎಸ್. ಸಿದ್ದಲಿಂಗಯ್ಯ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಸಿದ್ದಲಿಂಗಯ್ಯ ಅವರು ಚಿತ್ರದುರ್ಗದ ಸರ್ಕಾರಿ ಕಲಾ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿ, ವಿವಿಧ ಕಾಲೇಜುಗಳಲ್ಲಿ ಪ್ರಾಂಶುಪಾಲರಾಗಿ, ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶಕರಾಗಿ ಕೆಲಸ ಮಾಡಿದ್ದರು. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿದ್ದ ಸಿದ್ದಲಿಂಗಯ್ಯರವರು ಸಾಹಿತ್ಯ ಅಕಾಡೆಮಿಯ ವಿಶೇಷ ಗೌರವ, ರಾಜ್ಯೋತ್ಸವ ಪ್ರಶಸ್ತಿ, ಬಸವ ಪ್ರಶಸ್ತಿ, ಮಾಸ್ತಿ ಪ್ರಶಸ್ತಿ ಸೇರಿ ಹಲವು ಪುರಸ್ಕಾರಗಳಿಗೆ ಭಾಜನರಾಗಿದ್ದರು ಎಂದು ಅವರು ತಿಳಿಸಿದ್ದಾರೆ.
ಮೃತರ ಕುಟುಂಬಕ್ಕೆ, ಬಂಧುಮಿತ್ರರು ಮತ್ತು ಅಭಿಮಾನಿಗಳಿಗೆ ಅಗಲುವಿಕೆಯ ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.
(ಕರುಣಾಕರ ಖಾಸಲೆ)
ರಾಜ್ಯ ಮಾಧ್ಯಮ ಸಂಚಾಲಕರು
ಬಿಜೆಪಿ ಕರ್ನಾಟಕ
To Write Comment Please Login