
2-5-2025
ಪ್ರಕಟಣೆಯ ಕೃಪೆಗಾಗಿ
ಪೊಲೀಸರು ಮುಂಜಾಗ್ರತೆ ವಹಿಸಿಲ್ಲ- ಎಸ್.ಹರೀಶ್
ಬೆಂಗಳೂರು: ಸುಹಾಸ್ ಶೆಟ್ಟಿ ಅವರನ್ನು ಸಾಯಿಸುವುದಾಗಿ ಹಾಗೂ ಶ್ರದ್ಧಾಂಜಲಿ ಸಲ್ಲಿಸುವುದಾಗಿ ಮುಂಚಿತವಾಗಿ ತಿಳಿಸಿದ್ದರೂ ಪೊಲೀಸರು ಮುಂಜಾಗ್ರತಾ ಕ್ರಮ ಕೈಗೊಂಡಿಲ್ಲ ಎಂದು ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್ ಅವರು ಆಕ್ಷೇಪಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿನ್ನೆ ಹತ್ಯೆಗೀಡಾದ ಸುಹಾಸ್ ಶೆಟ್ಟಿ ಅವರಿಗೆ ಇಂದು ಸಂಜೆ “ಫ್ರೀಡಂ ಪಾರ್ಕ್”ನಲ್ಲಿ ಶ್ರದ್ಧಾಂಜಲಿ ಸಲ್ಲಿಸಿ ಮಾತನಾಡಿದ ಅವರು, ಇದರಿಂದ ನಾವು ಹಿಂದೂ ಕಾರ್ಯಕರ್ತನನ್ನು ಕಳಕೊಳ್ಳಬೇಕಾಗಿದೆ. ಇದರ ವಿರುದ್ಧ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಲಿದ್ದೇವೆ ಎಂದು ತಿಳಿಸಿದರು.
ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ ಅವರು ಮಾತನಾಡಿ, ಕಾಂಗ್ರೆಸ್ ಸರಕಾರ ಬಂದಾಗ ಜಿಹಾದಿಗಳು, ಭಯೋತ್ಪಾದಕರಿಗೆ ಹುಮ್ಮಸ್ಸು ಬರುತ್ತದೆ. ಡಿಜೆ ಹಳ್ಳಿ, ಕೆಜಿ ಹಳ್ಳಿ, ಹುಬ್ಬಳ್ಳಿ ಪೊಲೀಸ್ ಠಾಣೆ ಸುಟ್ಟು ಹಾಕಿದವರನ್ನು ನಿರಪರಾಧಿಗಳೆಂದು ಬಿಡುವುದರಿಂದ ಇಂಥ ದುರ್ಘಟನೆ ನಡೆಯುತ್ತದೆ ಎಂದು ಆಕ್ಷೇಪಿಸಿದರು. ಪಕ್ಷದ ಮುಖಂಡರು, ಕಾರ್ಯಕರ್ತರು ಈ ಸಾಂಕೇತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
(ಕರುಣಾಕರ ಖಾಸಲೆ)
ಮಾಧ್ಯಮ ಸಂಚಾಲಕರು
ಬಿಜೆಪಿ ಕರ್ನಾಟಕ
To Write Comment Please Login