
17.5.2025
ಪ್ರಕಟಣೆಯ ಕೃಪೆಗಾಗಿ
ಸುಳ್ಯದಲ್ಲಿ ಚುನಾಯಿತ ಸಹಕಾರಿಗಳ ಸಮಾವೇಶ
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಆಯೋಜಿಸಿದ್ದ ಪಕ್ಷದ ಚುನಾಯಿತ ಸಹಕಾರಿಗಳ ಸಮಾವೇಶವನ್ನು ಇಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಉದ್ಘಾಟಿಸಿದರು.
ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿ ಜೀ ಅವರ ನೇತೃತ್ವದಲ್ಲಿ ದೇಶವು ವಿಶ್ವವೇ ತಿರುಗಿ ನೋಡುವ ಮಟ್ಟಿಗೆ ಅಭಿವೃದ್ಧಿಯ ನಾಗಾಲೋಟದೊಂದಿಗೆ ಸಾಗುತ್ತಿದೆ. ಮುಂದಿನ ಎಲ್ಲಾ ಸಹಕಾರಿ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಸಂಕಲ್ಪ ಮಾಡಲಾಯಿತು. ಸಹಕಾರಿ ಕ್ಷೇತ್ರಗಳ ವಿವಿಧ ಚುನಾವಣೆಗಳಲ್ಲಿ ನೂತನವಾಗಿ ಆಯ್ಕೆಯಾಗಿರುವ ಎಲ್ಲಾ ಪ್ರತಿನಿಧಿಗಳನ್ನು ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ಸಚಿವ ಎಸ್.ಅಂಗಾರ, ಯುವಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಹರೀಶ್ ಪೂಂಜ, ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕರಾದ ಕು ಭಾಗೀರಥಿ ಮರುಳ್ಯ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಜಿಲ್ಲಾಧ್ಯಕ್ಷ ಸತೀಶ್ ಕಂಪಲ ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು
(ಕರುಣಾಕರ ಖಾಸಲೆ)
ಮಾಧ್ಯಮ ಸಂಚಾಲಕರು
ಬಿಜೆಪಿ ಕರ್ನಾಟಕ
To Write Comment Please Login