2nd phase of Janakrosha Yatra from Nippani


14-04-2025
Press Release

Download Document

14-4-2025

 

ಪ್ರಕಟಣೆಯ ಕೃಪೆಗಾಗಿ

 

ನಿಪ್ಪಾಣಿಯಿಂದ 2ನೇ ಹಂತದ ಜನಾಕ್ರೋಶ ಯಾತ್ರೆ

ಬೆಂಗಳೂರು: ನಮ್ಮ ಎರಡನೇ ಹಂತದ ಜನಾಕ್ರೋಶ ಯಾತ್ರೆಯು ಬೆಳಗಾವಿಯ ನಿಪ್ಪಾಣಿಯಿಂದ ಆರಂಭವಾಗಲಿದೆ ಎಂದು ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಅವರು ತಿಳಿಸಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನಾಳೆ ಡಾ. ಅಂಬೇಡ್ಕರ್ ಅವರು ನಿಪ್ಪಾಣಿಗೆ ಆಗಮಿಸಿ 100 ವರ್ಷ ಆಗುತ್ತಿದೆ. ಇದನ್ನು ವಿಜೃಂಭಣೆಯಿಂದ ಆಚರಿಸುವ ಹಿನ್ನೆಲೆಯಲ್ಲಿ ನಿಪ್ಪಾಣಿಯಲ್ಲಿ ಕಾರ್ಯಕ್ರಮ ಇದೆ ಎಂದರು.

16ರಂದು ಬೆಳಿಗ್ಗೆ ಬೆಳಗಾವಿಯಲ್ಲಿ ಜನಾಕ್ರೋಶ ಕಾರ್ಯಕ್ರಮ ಇದೆ. ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕರು, ಜಗದೀಶ ಶೆಟ್ಟರ್ ಮೊದಲಾದ ಪ್ರಮುಖರು ಭಾಗವಹಿಸುವರು. ಹುಬ್ಬಳ್ಳಿ ಕಾರ್ಯಕ್ರಮವನ್ನು 28ಕ್ಕೆ ಮುಂದೂಡಲಾಗಿದೆ. 17ರಂದು ಬಾಗಲಕೋಟೆ, ವಿಜಯಪುರದಲ್ಲಿ ಕಾರ್ಯಕ್ರಮ ನಡೆಸಲಿದ್ದೇವೆ ಎಂದು ವಿವರಿಸಿದರು.

18ರಂದು ಕಲಬುರ್ಗಿ, ಬೀದರ್‍ನಲ್ಲಿ ಕಾರ್ಯಕ್ರಮ ಇದೆ. 3ನೇ ಹಂತದ ಜನಾಕ್ರೋಶವು 21ರಿಂದ ಪ್ರಾರಂಭವಾಗುತ್ತದೆ ಎಂದು ತಿಳಿಸಿದರು.

 

(ಕರುಣಾಕರ ಖಾಸಲೆ)

ಮಾಧ್ಯಮ ಸಂಚಾಲಕರು

ಬಿಜೆಪಿ ಕರ್ನಾಟಕ

To Write Comment Please Login