
22-4-2025
ಪ್ರಕಟಣೆಯ ಕೃಪೆಗಾಗಿ
ಜನರ ನಡುವೆ ಬೆಂಕಿ ಹಚ್ಚುವ ಜಾತಿಗಣತಿ- ಜನಾರ್ದನ ರೆಡ್ಡಿ
ಗದಗ: ಜಾತಿ ಗಣತಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜಾತಿ- ಜಾತಿಗಳ ಮಧ್ಯೆ ಬೆಂಕಿ ಹಚ್ಚಿ ರಾಜ್ಯವನ್ನು ರಾಕ್ಷಸ ರಾಜ್ಯವನ್ನಾಗಿ ಮಾಡುತ್ತಿದ್ದಾರೆ ಎಂದು ಬಿಜೆಪಿ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಟೀಕಿಸಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಜನರಲ್ಲಿದ್ದ ಒಗ್ಗಟ್ಟನ್ನು ಹಾಳು ಮಾಡಿ ವಿಭಜಿಸುವ ಪ್ರವೃತ್ತಿಯನ್ನು ರಾಜ್ಯದ ಮುಖ್ಯಮಂತ್ರಿಗಳೇ ತೋರುತ್ತಿದ್ದಾರೆ ಎಂದು ಆಕ್ಷೇಪಿಸಿದರು.
ಬೆಲೆ ಏರಿಕೆ, ಜಾತಿ ಗಣತಿ ಮೂಲಕ ಕೆಟ್ಟ ಆಡಳಿತವನ್ನು ಕಾಂಗ್ರೆಸ್ ಪಕ್ಷವು ನೀಡುತ್ತಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ನಡೆಯುತ್ತಿರುವ ಜನಾಕ್ರೋಶ ಯಾತ್ರೆಯನ್ನು ಜನತೆ ದೊಡ್ಡ ಪ್ರಮಾಣದಲ್ಲಿ ಸ್ವಾಗತಿಸುತ್ತಿದ್ದಾರೆ ಎಂದು ತಿಳಿಸಿದರು.
ಪ್ರಶ್ನೆಗೆ ಉತ್ತರಿಸಿದ ಅವರು ಹಿಂದೂ ಸಂಸ್ಕೃತಿಯ ಮೇಲೆ ದಾಳಿ ನಡೆಯುತ್ತಿದೆ. ಪರೀಕ್ಷೆ ಬರೆಯಲು ಹೋಗಿದ್ದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ದು ಖಂಡನೀಯ ಎಂದು ತಿಳಿಸಿದರು.
(ಕರುಣಾಕರ ಖಾಸಲೆ)
ಮಾಧ್ಯಮ ಸಂಚಾಲಕರು
ಬಿಜೆಪಿ ಕರ್ನಾಟಕ
To Write Comment Please Login