Historic closing ceremony of the 'Bhima Hejje' century celebration programme


15-04-2025
Press Release

Download Document

15-4-2025

 

ಪ್ರಕಟಣೆಯ ಕೃಪೆಗಾಗಿ

 

ಕೇವಲ ಅಧಿಕಾರಕ್ಕಾಗಿ ಅಂಬೇಡ್ಕರರು, ಸಂವಿಧಾನ ನೆನಪಿಸಿಕೊಳ್ಳುವ ಕಾಂಗ್ರೆಸ್ ಪಕ್ಷ: ವಿಜಯೇಂದ್ರ

ನಿಪ್ಪಾಣಿ: ದೇಶದಲ್ಲಿ ಕಾಂಗ್ರೆಸ್ಸಿನ ಕೈಯಲ್ಲಿ ಅಧಿಕಾರವಿಲ್ಲ. ಅಧಿಕಾರಕ್ಕಾಗಿ ಕಾಂಗ್ರೆಸ್ಸಿಗರು ಡಾ. ಅಂಬೇಡ್ಕರ್ ಅವರನ್ನು ಮತ್ತು ಸಂವಿಧಾನವನ್ನು ನೆನಪು ಮಾಡಿಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದ್ದಾರೆ.

ಇಂದು ಇಲ್ಲಿ ಏರ್ಪಡಿಸಿದ್ದ ‘ಭೀಮ ಹೆಜ್ಜೆ’ ಶತಮಾನದ ಸಂಭ್ರಮ ಕಾರ್ಯಕ್ರಮದ ಐತಿಹಾಸಿಕ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಕೇವಲ ಚುನಾವಣೆಯಲ್ಲಿ ಗೆಲ್ಲಲು ಕಾಂಗ್ರೆಸ್ಸಿನವರು ಡಾ. ಅಂಬೇಡ್ಕರರನ್ನು ಈಗ ನೆನಪಿಸುತ್ತಿದ್ದಾರೆ ಎಂದು ಆರೋಪಿಸಿದರು. ಭಾರತ ಅತಿ ದೊಡ್ಡ ಪ್ರಜಾಪ್ರಭುತ್ವದ ದೇಶ. ಈ ದೇಶಕ್ಕೆ ಸಂವಿಧಾನ ನೀಡಿದ ಪುಣ್ಯಾತ್ಮ ಡಾ. ಅಂಬೇಡ್ಕರರಿಗೆ ಗೌರವ ಕೊಡುವ ರಾಷ್ಟ್ರವಿದು ಎಂದರು.

ಸುಮಾರು 60 ವರ್ಷ ದೇಶವನ್ನಾಳಿದ ಕಾಂಗ್ರೆಸ್ ಪಕ್ಷವು ಡಾ. ಅಂಬೇಡ್ಕರರಿಗೆ ನಿರಂತರವಾಗಿ ಅವಮಾನ ಮಾಡಿತು. ಅಟಲ್ ಬಿಹಾರಿ ವಾಜಪೇಯಿ ಅವರ ಆಗ್ರಹದೊಂದಿಗೆ ವಿ.ಪಿ.ಸಿಂಗ್ ಸರಕಾರವು ಅಂಬೇಡ್ಕರರಿಗೆ ಭಾರತ ರತ್ನ ನೀಡಿತ್ತು ಎಂದು ನೆನಪಿಸಿದರು.

ಬಾಬಾಸಾಹೇಬರ ಅಂತ್ಯಸಂಸ್ಕಾರಕ್ಕೂ ದೆಹಲಿಯಲ್ಲಿ ಜಾಗ ನೀಡದ ಸರಕಾರ ಕಾಂಗ್ರೆಸ್ಸಿನದು. ಕಾಂಗ್ರೆಸ್ಸಿನವರು ಎರಡು ಬಾರಿ ಬಾಬಾಸಾಹೇಬ ಅಂಬೇಡ್ಕರ ಅವರನ್ನು ಸೋಲಿಸಿದ್ದರು. ಅಂಬೇಡ್ಕರರನ್ನು ಸೋಲಿಸಿದ ವ್ಯಕ್ತಿಗೆ ಕಾಂಗ್ರೆಸ್ಸಿಗರು ಪದ್ಮವಿಭೂಷಣ ನೀಡಿದ್ದರು ಎಂದು ಟೀಕಿಸಿದರು. ಡಾ. ಅಂಬೇಡ್ಕರರ ರಥ ತಂದ ಮುಖಂಡರು, ಇಲ್ಲಿ ಕಾರ್ಯಕ್ರಮದ ಯಶಸ್ವಿಗೆ ಶ್ರಮಿಸಿದ ಶಶಿಕಲಾ ಜೊಲ್ಲೆ ಅವರನ್ನು ಅಭಿನಂದಿಸಿದರು.

ಕಾಂಗ್ರೆಸ್ಸಿಗರಿಂದ ಬೆಲೆ ಏರಿಕೆ ಒಂದೇ ಗ್ಯಾರಂಟಿ. ಇದು ಜನವಿರೋಧಿ ಸರಕಾರ. ಬೆಲೆ ಏರಿಕೆಯ ಸರಕಾರ. 50 ಅಗತ್ಯ ವಸ್ತುಗಳ ಮೇಲೆ ಬೆಲೆ ಏರಿಸಿದ್ದಾರೆ. ದಲಿತರ ಸಾವಿರಾರು ಕೋಟಿ ಹಣದ ದುರ್ಬಳಕೆ ಮಾಡಿದ್ದಾರೆ ಎಂದು ಆಕ್ಷೇಪಿಸಿದರು.

ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಸ್ಪಷ್ಟ ಬಹುಮತದೊಂದಿಗೆ ಗೆಲ್ಲಿಸಬೇಕಿದೆ. ಎಲ್ಲ ಜನರ ವಿಶ್ವಾಸದ ಮೂಲಕ ಬಿಜೆಪಿ ಸ್ವಂತ ಶಕ್ತಿಯೊಂದಿಗೆ ಅಧಿಕಾರಕ್ಕೆ ತರೋಣ. ಜನವಿರೋಧಿ ಕಾಂಗ್ರೆಸ್ ಆಡಳಿತವನ್ನು ಕಿತ್ತೊಗೆಯೋಣ ಎಂದು ಮನವಿ ಮಾಡಿದರು.

ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ಮಾಜಿ ಸಚಿವೆ ಶ್ರೀಮತಿ ಶಶಿಕಲಾ ಜೊಲ್ಲೆ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಶಾಸಕ ಪಿ. ರಾಜೀವ್, ಬಿಜೆಪಿ ರಾಜ್ಯ ಉಪಾಧ್ಯಕ್ಷ ಮತ್ತು ಮಾಜಿ ಸಚಿವ ಎನ್.ಮಹೇಶ್, ಶಾಸಕರಾದ ಡಾ. ಅವಿನಾಶ್ ಜಾಧವ್, ದುರ್ಯೋಧನ ಐಹೊಳೆ, ಬಸವರಾಜ್ ಮತ್ತಿಮೋಡ್, ನಿಖಿಲ್ ಕತ್ತಿ, ಡಾ. ಚಂದ್ರು ಲಮಾಣಿ, ವಿಧಾನಪರಿಷತ್ ಸದಸ್ಯ ಹನುಮಂತ ನಿರಾಣಿ, ಮಾಜಿ ಸಂಸದರಾದ ಡಾ. ಉಮೇಶ್ ಜಾಧವ್, ಎಸ್. ಮುನಿಸ್ವಾಮಿ, ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ಶಾಸಕ ಸಿಮೆಂಟ್ ಮಂಜುನಾಥ್, ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ, ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಂದ್ರ ಕೌತಾಳ, ವಿಧಾನಪರಿಷತ್ ಮಾಜಿ ಸದಸ್ಯ ವಿವೇಕ್ ರಾವ್ ಪಾಟೀಲ್, ಮಾಜಿ ಸಂಸದೆ ಮಂಗಳಾ ಅಂಗಡಿ, ರಾಜ್ಯ ಬಿಜೆಪಿ ಮಾಜಿ ಕಾರ್ಯದರ್ಶಿ ಜಗದೀಶ್ ಹಿರೇಮನಿ, ಚಿಕ್ಕೋಡಿ ಜಿಲ್ಲಾಧ್ಯಕ್ಷ ಸತೀಶ್ ಅಪ್ಪಾಜಿಗೋಳ, ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ, ಬೆಳಗಾವಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ್, ಬೆಳಗಾವಿ ಮಹಾನಗರ ಮಾಜಿ ಜಿಲ್ಲಾಧ್ಯಕ್ಷ ಸಂಜಯ್ ಪಾಟೀಲ್,  ಮಾಜಿ ಶಾಸಕರಾದ ಶ್ರೀಮಂತ ಪಾಟೀಲ್, ಬಾಳಸಾಬ ಶಾಮ್ ರಾವ್ ವಡ್ಡಾರ್, ಮಹೇಶ್ ಕುಮಠಳ್ಳಿ, ಅರವಿಂದ ಪಾಟೀಲ್, ವಿಶ್ವನಾಥ್ ಪಾಟೀಲ್, ಮತ್ತು ಪಕ್ಷದ ಮುಖಂಡರು ಉಪಸ್ಥಿತರಿದ್ದರು.

 

(ಕರುಣಾಕರ ಖಾಸಲೆ)

ಮಾಧ್ಯಮ ಸಂಚಾಲಕರು

ಬಿಜೆಪಿ ಕರ್ನಾಟಕ

To Write Comment Please Login