Karnataka is now number 1 in corruption - BY Vijayendra's criticism


18-04-2025
Press Release

Download Document

18-4-2025

 

ಪ್ರಕಟಣೆಯ ಕೃಪೆಗಾಗಿ

 

ಕರ್ನಾಟಕವೀಗ ಭ್ರಷ್ಟಾಚಾರದಲ್ಲಿ ನಂಬರ್ 1- ಬಿ.ವೈ.ವಿಜಯೇಂದ್ರ ಟೀಕೆ

ಬೀದರ್: ಪರಿಶಿಷ್ಟ ಜಾತಿ, ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟ 38,500 ಕೋಟಿ ಹಣವನ್ನು ಕಾಂಗ್ರೆಸ್ ಸರಕಾರವು ದುರುಪಯೋಗ ಮಾಡಿಕೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ.

ಇಂದು ಇಲ್ಲಿ ಜನಾಕ್ರೋಶ ಯಾತ್ರೆಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳು, ಸರಕಾರ ಜವಾಬ್ದಾರಿ ಮರೆತಿವೆ. ಅವರನ್ನು ಎಚ್ಚರಿಸುವ ಕೆಲಸವನ್ನು ವಿಪಕ್ಷವಾಗಿ ನಾವು ಮಾಡುತ್ತಿದ್ದೇವೆ. ಅದಕ್ಕಾಗಿ ಈ ಜನಾಕ್ರೋಶದ ಯಾತ್ರೆ ಎಂದು ತಿಳಿಸಿದರು.

ರಾಜ್ಯದ ಸಿಎಂ ಆಗಿ ರೈತರ ಕಣ್ಣೀರು ಒರೆಸಿದ್ದೀರಾ? ಬಡವರ ಕಣ್ಣೀರು ಒರೆಸಿದ್ದೀರಾ? ಪರಿಶಿಷ್ಟ ಜಾತಿ, ಪಂಗಡದವರ ನೋವಿಗೆ ಸ್ಪಂದಿಸಿದ್ದೀರಾ ಎಂದು ಸಿದ್ದರಾಮಯ್ಯನವರನ್ನು ಪ್ರಶ್ನಿಸಿದರು. ರಾಜ್ಯವು ಹಿಂದೆ ಯಡಿಯೂರಪ್ಪನವರ ನೇತೃತ್ವದಲ್ಲಿ ಅಭಿವೃದ್ಧಿ ವಿಚಾರದಲ್ಲಿ ದೇಶದಲ್ಲಿ ಎರಡನೇ ಸ್ಥಾನದಲ್ಲಿತ್ತು ಎಂದು ವಿವರಿಸಿದರು.

ರಾಜ್ಯವು ಈಗ ಭ್ರಷ್ಟಾಚಾರದಲ್ಲಿ ನಂಬರ್ ವನ್ ಸ್ಥಾನ ಪಡೆದಿದೆ. ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಈ ಸರ್ಟಿಫಿಕೇಟ್ ಕೊಟ್ಟಿದ್ದಾರೆ ಎಂದು ತಿಳಿಸಿದರು. ಬಡವರ, ರೈತರ, ಪರಿಶಿಷ್ಟ ಜಾತಿ, ಪಂಗಡದ ಪರವಾಗಿದ್ದ ಕಾಳಜಿ ಎಲ್ಲಿ ಹೋಗಿದೆ ಸಿದ್ದರಾಮಯ್ಯನವರೇ ಎಂದು ಕೇಳಿದರು. ಬೆಲೆ ಏರಿಕೆಯಿಂದ ಜನರು ತತ್ತರಿಸಿದ್ದಾರೆ. ಈ ಸರಕಾರದ ಅಲ್ಪಸಂಖ್ಯಾತರ ಪರ ನೀತಿಯಿಂದ ಹಿಂದೂಗಳಿಗೆ ಅನ್ಯಾಯವಾಗಿದೆ ಎಂದು ತಿಳಿಸಿದರು.

ಬಿಜೆಪಿ ಮುಸಲ್ಮಾನರ ವಿರೋಧಿಯಲ್ಲ; ಪ್ರಧಾನಿ ನರೇಂದ್ರ ಮೋದಿಜೀ ಅವರು ತ್ರಿವಳಿ ತಲಾಖ್ ರದ್ದು ಮಾಡಿ ಮುಸಲ್ಮಾನ ಹೆಣ್ಮಕ್ಕಳಿಗೆ ನ್ಯಾಯ ದೊರಕಿಸಿದ್ದಾರೆ. ಆದರೆ, ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎನ್ನುವವರನ್ನು ನಾವು ಕ್ಷಮಿಸುವುದಿಲ್ಲ ಎಂದು ಎಚ್ಚರಿಸಿದರು.

ಬಿಜೆಪಿ ದೇಶಭಕ್ತರ ಪಕ್ಷ. ನಾವು ಕಾಂಗ್ರೆಸ್ಸಿನಿಂದ ಪಾಠ ಕಲಿಯಬೇಕಿಲ್ಲ ಎಂದು ತಿಳಿಸಿದರು. ಕಾಂಗ್ರೆಸ್ ಪಕ್ಷದ ದಲಿತ ಶಾಸಕರ ಮನೆಗೆ ದೇಶದ್ರೋಹಿಗಳು ಬೆಂಕಿ ಹಚ್ಚಿದಾಗ ಆ ದೇಶದ್ರೋಹಿಗಳ ಪರ ನಿಂತ ಪಕ್ಷ ಕಾಂಗ್ರೆಸ್ ಎಂದು ಟೀಕಿಸಿದರು. ವಾಲ್ಮೀಕಿ ಅಭಿವೃದ್ಧಿ ನಿಗಮದ 150 ಕೋಟಿ ಹಣವನ್ನು ಹೊರರಾಜ್ಯಕ್ಕೆ ಕಳುಹಿಸಿದ ಸಂಬಂಧ ಪ್ರಿಯಾಂಕ್ ಖರ್ಗೆಯವರು ಹಣಕಾಸು ಸಚಿವರೂ ಆದ ಮುಖ್ಯಮಂತ್ರಿಗಳನ್ನು ಯಾಕೆ ಪ್ರಶ್ನಿಸಿಲ್ಲ ಎಂದು ಕೇಳಿದರು.

ಸಿದ್ದರಾಮಯ್ಯನವರು ಹಿಂದೆ ಲಿಂಗಾಯತ- ವೀರಶೈವ ಪ್ರತ್ಯೇಕ ಧರ್ಮ ಎಂದು ಬೆಂಕಿ ಹಚ್ಚುವ ಕೆಲಸ ಮಾಡಿದ್ದರು. ಇವತ್ತು ಜಾತಿ ಜನಗಣತಿ ಎಂದು ಹೇಳಿ ಮುಸಲ್ಮಾನರನ್ನು ಎತ್ತಿಕಟ್ಟಿ ಹಿಂದೂಗಳಿಗೆ ಅವಮಾನ ಮಾಡಿದ್ದಾರೆ. ಹಿಂದೂ- ಮುಸ್ಲಿಮರ ಮಧ್ಯೆ ವೈರತ್ವ ಸೃಷ್ಟಿಸುವ ಕೆಲಸವನ್ನು ಮುಖ್ಯಮಂತ್ರಿಗಳು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ರಾಜ್ಯದ ಜನವಿರೋಧಿ, ರೈತ ವಿರೋಧಿ, ಭ್ರಷ್ಟ ಸರಕಾರ, ಇಂಥ ಹಿಂದೂ ವಿರೋಧಿ ಸರಕಾರವನ್ನು ಬುಡಸಮೇತ ಕಿತ್ತು ಹಾಕುವ ಕೆಲಸವನ್ನು ಬಿಜೆಪಿ ಕಾರ್ಯಕರ್ತರಾದ ನಾವು ಮಾಡಬೇಕಿದೆ ಎಂದು ವಿನಂತಿಸಿದರು. ಅದಕ್ಕಾಗಿ ಬಿಜೆಪಿಯ ಜನಾಕ್ರೋಶ ಯಾತ್ರೆ ಇಲ್ಲಿಗೆ ಬಂದಿದೆ ಎಂದು ತಿಳಿಸಿದರು.

ಈ ಸರಕಾರದ ವಿರುದ್ಧ ಮುಂದಿನ 3 ವರ್ಷಗಳ ಕಾಲ ನಾವು ಬೀದಿಗಿಳಿದು ಹೋರಾಟ ಮಾಡಬೇಕಿದೆ. ಸರಕಾರಕ್ಕೆ ತಕ್ಕ ಪಾಠ ಕಲಿಸುವ ಕೆಲಸ ಮಾಡಬೇಕೆಂದು ಕೈ ಮುಗಿದು ವಿನಂತಿಸುವುದಾಗಿ ತಿಳಿಸಿದರು.

 ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಕೇಂದ್ರದ ಮಾಜಿ ಸಚಿವ ಭಗವಂತ್ ಖೂಬಾ, ಮಾಜಿ ಸಚಿವ ಮತ್ತು ಶಾಸಕ ಪ್ರಭು ಚೌಹಾಣ್, ಮಾಜಿ ಸಚಿವ ಬಿ.ಶ್ರೀರಾಮುಲು, ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್, ರಾಜ್ಯ ಕಾರ್ಯದರ್ಶಿ ಹಾಗೂ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ, ಶಾಸಕರಾದ ಬಸವರಾಜ ಮುತ್ತಿಮೂಡ, ಶರಣು ಸಲಗಾರ್, ಡಾ. ಸಿದ್ದಲಿಂಗ  ಪಾಟೀಲ್, ಡಾ. ಶೈಲೇಂದ್ರ ಬೆಲ್ದಾಳೆ, ವಿಧಾನ ಪರಿಷತ್ ಮಾಜಿ ಸಭಾಪತಿ ರಘುನಾಥರಾವ್ ಮಲ್ಕಾಪುರೆ, ರೈತ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ಮಾಜಿ ಶಾಸಕ ಎ.ಎಸ್. ಪಾಟೀಲ್ ನಡಹಳ್ಳಿ, ಮಾಜಿ ಶಾಸಕರಾದ ಪ್ರಕಾಶ ಖಂಡ್ರೆ, ಸುಭಾಷ ಕಲ್ಲೂರ, ಗುಂಡಪ್ಪಾ ವಕೀಲರು, ರಾಜ್ಯ ಪ್ರಶಿಕ್ಷಣ ಪ್ರಕೋಷ್ಠ ಸಂಚಾಲಕ ರಾಜಶೇಖರ ನಾಗಮೂರ್ತಿ, ರಾಜ್ಯ ಪರಿಷತ್ ಸದಸ್ಯ ರಾಜರೆಡ್ಡಿ ಶಾಬಾದೆ, ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ ಹೇಮಾತುಕಾರೆಡ್ಡಿ, ರಾಜ್ಯ ಮಹಿಳಾ ಫೆಡರೇಷನ್ ಅಧ್ಯಕ್ಷ ಶಕುಂತಲಾ ಬೆಲ್ದಾಳೆ, ಲೋಕಸಭೆ ಸ್ಪರ್ಧಿಸಿದ್ದ ಅಭ್ಯರ್ಥಿ ಬಸವರಾಜ ಆರ್ಯಾ, ಬೀದರ್ ಜಿಲ್ಲಾಧ್ಯಕ್ಷ ಸೋಮನಾಥ್ ಪಾಟೀಲ್, ನಿಕಟಪೂರ್ವ ಜಿಲ್ಲಾಧ್ಯಕ್ಷ ಶಿವಾನಂದ ಮಂಠಾಳಕರ, ಮಾಜಿ ಜಿಲ್ಲಾಧ್ಯಕ್ಷರಾದ ಬಾಬುರಾವ ಮದಕಟ್ಟಿ, ನಂದಕಿಶೋರ ವರ್ಮಾ, ಶಿವರಾಜ ಗಂದಗೆ, ಜಿಲ್ಲಾ ಪ್ರಧಾನ ಕಾರ್ಯದಶಿಗಳಾದ ಪೀರಪ್ಪಾ ಔರಾದೆ, ಕಿರಣ ಪಾಟೀಲ, ಮಾಧವ ಹಾಸುರೆ, ಜಿ.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ವಿಜಯಕುಮಾರ ಎ. ಪಾಟೀಲ, ಬುಡಾ ಮಾಜಿ ಅಧ್ಯಕ್ಷ ಬಾಬು ವಾಲಿ, ಔರಾದ ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಸರಸ್ವತಿ ಘೊಳ, ಔರಾದ ಎಪಿಎಂಸಿ ಅಧ್ಯಕ್ಷ ಧೊಂಡಿಬಾ ನರೊಟೆ, ಮುಖಂಡರುಗಳಾದ ಚನ್ನಬಸವ ಬಳತೆ, ಪ್ರದೀಪ ವಾತಡೆ, ರವಿ ಚಂದನಕೆರೆ, ಸೋಮು ಪಾಟೀಲ ಗಾದಗಿ, ಬಾಬು ಮಾಲ್ಕಾಪುರೆ, ಜಗನ್ನಾಥ ಜಮಾದಾರ, ಫರ್ನಾಂಡಿಸ್ ಹಿಪ್ಪಳಗಾಂವ, ಜಿಲ್ಲಾ ಪದಾಧಿಕಾರಿಗಳು, ಮಂಡಲ ಅಧ್ಯಕ್ಷರು ಮತ್ತು ಪಕ್ಷದ ಮುಖಂಡರು ಪಾಲ್ಗೊಂಡಿದ್ದರು.

 

(ಕರುಣಾಕರ ಖಾಸಲೆ)

ಮಾಧ್ಯಮ ಸಂಚಾಲಕರು

ಬಿಜೆಪಿ ಕರ್ನಾಟಕ

To Write Comment Please Login