State OBC Morcha leaders meeting at BJP office


06-05-2025
Press Release

Download Document

6-5-2025

 

ಪ್ರಕಟಣೆಯ ಕೃಪೆಗಾಗಿ

 

ಬಿಜೆಪಿ ಕಚೇರಿಯಲ್ಲಿ ರಾಜ್ಯ ಹಿಂದುಳಿದ ವರ್ಗದ ನಾಯಕರ ಸಭೆ

ಬಿಜೆಪಿಗೆ ಸದುದ್ದೇಶ, ಕಾಂಗ್ರೆಸ್ಸಿನವರ ಷಡ್ಯಂತ್ರ- ವಿಜಯೇಂದ್ರ ವಿಶ್ಲೇಷಣೆ

ಬೆಂಗಳೂರು: ಜಾತಿ ಗಣತಿ ಮೂಲಕ ಸಮ ಸಮಾಜದ ನಿರ್ಮಾಣದ ಕನಸು ನರೇಂದ್ರ ಮೋದಿಜೀ ಅವರ ಸರಕಾರಕ್ಕಿದೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಜಾತಿಗಣತಿ ವಿಷಯದಲ್ಲಿ ಯಾವುದೇ ಸದುದ್ದೇಶ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಹೇಳಿದ್ದಾರೆ.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ” ದಲ್ಲಿ ಇಂದು ಏರ್ಪಡಿಸಿದ್ದ ರಾಜ್ಯ ಹಿಂದುಳಿದ ವರ್ಗದ ನಾಯಕರ ಸಭೆಯಲ್ಲಿ ಅವರು ಮಾತನಾಡಿದರು. ಜಾತಿ ಜನಗಣತಿ ವಿಚಾರದಲ್ಲಿ ಕಾಂಗ್ರೆಸ್ಸಿಗರಿಗೆ ದುರುದ್ದೇಶ ಇದೆ. ಕಾಂಗ್ರೆಸ್ಸಿನವರು ಮತ್ತು ಸಿದ್ದರಾಮಯ್ಯನವರಿಗೆ ಜಾತಿ- ಜಾತಿಗಳ ನಡುವೆ ಕಂದಕ ಸೃಷ್ಟಿಸುವ ಷಡ್ಯಂತ್ರ ಇದೆ; ಆದರೆ, ಬಿಜೆಪಿ ಮತ್ತು ಮೋದಿಜೀ ಅವರಿಗೆ ಕಾಯಕ ಸಮುದಾಯಗಳಿಗೆ ಶಕ್ತಿ ತುಂಬುವ ಕೆಲಸವನ್ನು ಮಾಡಬೇಕೆಂಬ ಸದುದ್ದೇಶ ಅಡಗಿದೆ ಎಂದು ವಿಶ್ಲೇಷಿಸಿದರು.

ಕಾಂಗ್ರೆಸ್ಸಿನವರಿಂದ ಕೇವಲ ಭಾಷಣ..

ಕಾಂಗ್ರೆಸ್ಸಿನವರು ಈಚೆಗೆ ಈ ಕುರಿತು ಮಾತನಾಡುತ್ತಿದ್ದಾರೆ. ಕಾಂಗ್ರೆಸ್ಸಿನವರು ಕೇವಲ ಭಾಷಣ ಮಾಡುತ್ತ ಬರುತ್ತಿದ್ದಾರೆ. ಆಡದೇ ಮಾಡುವವ ರೂಢಿಯೊಳಗುತ್ತಮನು ಎಂಬಂತೆ ಮೋದಿಜೀ ಅವರು ಹೆಚ್ಚು ಮಾತನಾಡದೇ ಈ ನಿರ್ಧಾರ ಮಾಡಿದ್ದಾರೆ ಎಂದು ವಿಜಯೇಂದ್ರ ಅವರು ವಿವರಿಸಿದರು.

ದೇಶದ ಹಿಂದುಳಿದ ಸಮುದಾಯಗಳಿಗೆ ಸಾಮಾಜಿಕ, ಶೈಕ್ಷಣಿಕ, ಔದ್ಯೋಗಿಕವಾಗಿ ನ್ಯಾಯ ಕೊಡಬೇಕು. 12ನೇ ಶತಮಾನದಲ್ಲಿ ಅಣ್ಣ ಬಸವಣ್ಣನವರು ಸಮ ಸಮಾಜದ ಕನಸನ್ನು ಕಂಡಿದ್ದರು. ಆ ನಿಟ್ಟಿನಲ್ಲಿ ಸದುದ್ದೇಶದಿಂದ ಮೋದಿಜೀ ಈ ಉತ್ತಮ ನಿರ್ಧಾರ ಮಾಡಿದ್ದಾರೆ ಎಂದು ವಿವರಿಸಿದರು.

ಕಾಂಗ್ರೆಸ್ಸಿನ ದುರುದ್ದೇಶ ಮತ್ತು ಬಿಜೆಪಿಯ ಸದುದ್ದೇಶದ ಕುರಿತು ನಾವು ಜಾಗೃತಿ ಮೂಡಿಸಬೇಕಿದೆ ಎಂದು ಅವರು ಹೇಳಿದರು. ಮೋದಿಜೀ ಅವರ ನೇತೃತ್ವದಲ್ಲಿ ಕಳೆದ ಕ್ಯಾಬಿನೆಟ್ ಸಭೆಯಲ್ಲಿ ಜನಗಣತಿ ಜೊತೆಗೇ ಜಾತಿಗಣತಿಯ ಮಹತ್ವದ ನಿರ್ಧಾರ ಮಾಡಿದ್ದಾರೆ ಎಂದು ಅಭಿನಂದಿಸಿದರು.

ಕಾಂಗ್ರೆಸ್ಸಿಗೆ ನ್ಯಾಯ ಕೊಡುವ ಸದುದ್ದೇಶ ಇಲ್ಲ..

ಕರ್ನಾಟಕದಲ್ಲಿ ಸಿದ್ದರಾಮಯ್ಯನವರು ಜಾತಿ ಗಣತಿಗೆ ಚಾಲನೆ ಕೊಟ್ಟು ಅದನ್ನು ಅನುಷ್ಠಾನಕ್ಕೆ ತಾರದೆ ವಿಳಂಬ ಮಾಡಿದರು. ಕಳೆದ ಎರಡು ವರ್ಷಗಳಲ್ಲೂ ಇವರಿಗೆ ಕಾಂತರಾಜು ವರದಿಯನ್ನು ತಾರ್ಕಿಕ ಅಂತ್ಯಕ್ಕೆ ಒಯ್ಯಲು ಸಾಧ್ಯವಾಗಿಲ್ಲ ಎಂದು ಟೀಕಿಸಿದರು. ಬೇರೆ ರಾಜ್ಯಗಳು ಕೇವಲ ಒಂದು ವರ್ಷದಲ್ಲಿ ಈ ಸಾಧನೆ ಮಾಡಿದರೆ, ಸಿದ್ದರಾಮಯ್ಯನವರಿಗೆ 10 ವರ್ಷ ಆದರೂ ಸಾಧ್ಯವಾಗುತ್ತಿಲ್ಲ. ಹಿಂದುಳಿದ ಸಮುದಾಯಗಳಿಗೆ ನ್ಯಾಯ ಕೊಡುವ ಸದುದ್ದೇಶ ಇಲ್ಲದಿರುವುದೇ ಈ ವಿಳಂಬಕ್ಕೆ ಕಾರಣ ಎಂದು ಆಕ್ಷೇಪಿಸಿದರು.

ಕಾಂತರಾಜು ವರದಿಯನ್ನು ಸಿದ್ದರಾಮಯ್ಯನವರು ಸ್ವೀಕರಿಸಿಲ್ಲ; ಅದು ಆತುರಾತುರದಲ್ಲಿ ಜಯಪ್ರಕಾಶ್ ಹೆಗ್ಡೆ ವರದಿ ಆದುದು ನಮಗೂ ನಿಮಗೂ ಗೊತ್ತಿಲ್ಲ ಎಂದು ಟೀಕಿಸಿದರು. ಕಾಂಗ್ರೆಸ್ಸಿನ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಅವರೇ ಸಿದ್ದರಾಮಯ್ಯನವರಿಗೆ ಪ್ರಶ್ನೆ ಮಾಡಿದ್ದಾರೆ. ವರದಿ ಅವೈಜ್ಞಾನಿಕ ಎಂದಿದ್ದಾರೆ; 10 ವರ್ಷ ಕಳೆದಿದ್ದು ಅದರ ಅಂಕಿಅಂಶಗಳು ಹಳೆಯದಾಗಿವೆ ಎಂದಿದ್ದಾಗಿ ಗಮನ ಸೆಳೆದರು. 20-25 ವರ್ಷಗಳಾದರೂ ವರದಿ ಅನುಷ್ಠಾನ ಆಗಿ ಹಿಂದುಳಿದ ವರ್ಗಕ್ಕೆ ನ್ಯಾಯ ಸಿಗುತ್ತದೋ ಇಲ್ಲವೋ ಎಂಬ ಖಾತ್ರಿ ಇಲ್ಲ ಎಂದು ವಾಗ್ದಾಳಿ ನಡೆಸಿದರು.

ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಸಚಿವ ಮತ್ತು ಸಂಸದ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಶಾಸಕ ವಿ. ಸುನೀಲ್ ಕುಮಾರ್, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್, ರಾಜ್ಯ ಉಪಾಧ್ಯಕ್ಷ ಮತ್ತು ಶಾಸಕ ಭೈರತಿ ಬಸವರಾಜ್, ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ, ಸಂಸದರಾದ ಪಿ.ಸಿ. ಮೋಹನ್, ಯದುವೀರ್ ಒಡೆಯರ್, ವಿಧಾನಪರಿಷತ್ ಸದಸ್ಯ ಎಂ.ಜಿ. ಮುಳೆ, ಶಾಸಕ ದಿನಕರ ಶೆಟ್ಟಿ, ಒಬಿಸಿ ಮೋರ್ಚಾ ರಾಜ್ಯ ಅಧ್ಯಕ್ಷ ರಘು ಕೌಟಿಲ್ಯ, ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ಶಾಸಕ ಧೀರಜ್ ಮುನಿರಾಜು, ಮಾಜಿ ಸಚಿವರಾದ ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಪ್ರಮೋದ್ ಮಧ್ವರಾಜ್, ಒಬಿಸಿ ಮೋರ್ಚಾ ನಿಕಟಪೂರ್ವ ರಾಜ್ಯ ಅಧ್ಯಕ್ಷ ನೆ.ಲ. ನರೇಂದ್ರಬಾಬು, ವಿಧಾನಪರಿಷತ್ ಮಾಜಿ ಸದಸ್ಯೆ ಶ್ರೀಮತಿ ತಾರಾ ಅನುರಾಧ ಮತ್ತು ಪಕ್ಷದ ಮುಖಂಡರು ಉಪಸ್ಥಿತರಿದ್ದರು.

           

(ಕರುಣಾಕರ ಖಾಸಲೆ)

ಮಾಧ್ಯಮ ಸಂಚಾಲಕರು

ಬಿಜೆಪಿ ಕರ್ನಾಟಕ

To Write Comment Please Login